ಪ್ರತಿನಿಧಿ ವರದಿ ಚಾಮರಾಜನಗರ
ಯಳಂದೂರು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ತಾತ್ಕಾಲಿಕ ಪಟ್ಟಿಯನ್ನು ಸಂಬಂಧ ಪಟ್ಟ ಗ್ರಾಪಂ, ಶಾಲೆ ಹಾಗೂ ಅಂಗನವಾಡಿ ಕೇಂದ್ರ ಮತ್ತು ಆಯ್ಕೆ ಸಮಿತಿ ಸದಸ್ಯರ ಕಚೇರಿ ಪ್ರಕಟಣಾ ಫಲಕದಲ್ಲಿ ಪ್ರಕಟಿಸಿದ್ದು, ಈ ಸಂಬಂಧ ಆಕ್ಷೇಪಣೆಗಳಿದ್ದಲ್ಲಿ ಪೂರಕ ದಾಖಲೆಗಳೊಡನೆ ಜು.19ರ ಸಂಜೆ 5.30ರೊಳಗೆ ಶಿಶು ಯೋಜನಾ ಕಚೇರಿಗೆ ಸಲ್ಲಿಸಬಹುದು ಎಂದು ಯಳಂದೂರು ಶಿಶು ಅಬಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಲೂಕಿನ ಸಂತೇಮರಹಳ್ಳಿ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಮರು ಪರಿಶೀಲನಾ ತಾತ್ಕಾಲಿಕ ಪಟ್ಟಿಯಲ್ಲಿ ಒಂದು ಅಂಗನವಾಡಿ ಕಾರ್ಯಕರ್ತೆ ಹಾಗೂ 8 ಸಹಾಯಕಿಯರ ಪಟ್ಟಿಯನ್ನು ಸಂತೇಮರಹಳ್ಳಿ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಲಾಗಿದ್ದು, ಆಕ್ಷೇಪಣೆಗೆ ಅವಕಾಶ ಕಲ್ಪಿಸಲಾಗಿದೆ.
ಅಂಗನವಾಡಿ ಕೇಂದ್ರಗಳಿಗೆ ತಾತ್ಕಾಲಿಕವಾಗಿ ಆಯ್ಕೆಯಾಗಿರುವ ಅಭ್ಯರ್ಥಿಗಳ ಬಗ್ಗೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಜು.15ರವರೆಗೆ ರಜಾ ದಿನಗಳನ್ನು ಹೊರತುಪಡಿಸಿ ಕಚೇರಿ ಸಮಯದಲ್ಲಿ ಲಿಖಿತವಾಗಿ ಆಕ್ಷೇಪಣಾ ಅರ್ಜಿಯ ಜತೆಗೆ ಆಕ್ಷೇಪಣೆಗೆ ಸಂಬಂಧಪಟ್ಟ ಪೂರ್ಣ ದಾಖಲಾತಿಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು ಎಂದು ಸಂತೇಮರಹಳ್ಳಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಹಾಗೂ ತಾಲೂಕು ಮಟ್ಟದ ಪರಿಶೀಲನಾ ಸಮಿತಿ ಸದಸ್ಯ ಕಾರ್ಯದರ್ಶಿ ಟಿ.ಎಂ.ಜಯಶೀಲಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.