ಪ್ರತಿನಿಧಿ ವರದಿ ಗುಂಡ್ಲುಪೇಟೆ
ತಾಲೂಕಿನ ಬೇಗೂರು ಸಮೀಪದ ತ್ರಿಪುರ ಸುಂದರಿ ಕಲ್ಯಾಣ ಮಂಟಪದ ಬಳಿ ರಾಷ್ಟ್ರೀಯ ಹೆದ್ದಾರಿ 766 ರಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಉರುಳಿ ಬಿದ್ದು ಜಖಂಗೊಂಡಿದಿದೆ.
ಶನಿವಾರ ಸಂಜೆ ತಮಿಳುನಾಡಿನಿಂದ ಮೈಸೂರಿನ ಕಡೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಉರುಳಿ ಬಿದ್ದಿದೆ. ಆದರೆ ಕಾರಿನಲ್ಲಿದ್ದ ಐವರಿಗೆ ಸಣ್ಣ-ಪುಟ್ಟ ಗಾಯಗಳೊಂದಿಗೆ ಪ್ರಾಣಪಾಯದಿಂದ ಪಾರಾಗಿದ್ದಾರೆ. ಇದ್ದರಿಂದ ರಾಷ್ಟ್ರೀಯ ಹೆದ್ದಾರಿ 766 ರಲ್ಲಿ ಕೆಲಕಾಲ ಸಂಚಾರ ದಟ್ಟಣೆ ಉಂಟಾಗಿತ್ತು. ಕೂಡಲೇ ಸ್ಥಳಕ್ಕೆ ಧಾವಿಸಿದ ಬೇಗೂರು ಪೊಲೀಸರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು ಕಾರನ್ನು ವಶಕ್ಕೆ ಪಡೆದು ಮುಂದಿನ ತನಿಖೆ ಕೈಗೊಂಡಿದ್ದಾರೆ.