ಪ್ರತಿನಿಧಿ ವರದಿ ಹಾರೋಹಳ್ಳಿ
ಆದಾಯಕ್ಕಿಂತ ಹೆಚ್ಚು ಆಸ್ತಿಗಳಿರುವ ಆರೋಪದ ಮೇಲೆ ತಹಸೀಲ್ದಾರ್ ವಿಜಿಯಣ್ಣ ಅವರ ಮನೆ ಮತ್ತು ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ಗುರುವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ.
ಲೋಕಾಯುಕ್ತ ಎಸ್ಪಿ ನೇತೃತ್ವದ ಅಧಿಕಾರಿಗಳ ತಂಡವು, ಪಟ್ಟಣದಲ್ಲಿರುವ ವಿಜಿಯಣ್ಣ ಅವರ ನಿವಾಸ ಹಾಗೂ ಕಚೇರಿ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದರು. ತುಮಕೂರು ಜಿಲ್ಲೆಯವರಾದ ವಿಜಿಯಣ್ಣ ಮಂಡ್ಯ ಜಿಲ್ಲೆಯ ಮಳವಳ್ಳಿ, ಕೋಲಾರ, ಚಿಕ್ಕಬಳ್ಳಾಪುರದಲ್ಲಿ ತಹಸೀಲ್ದಾರ್ ಆಗಿ ಕಾರ್ಯನಿರ್ವಹಿಸಿ,. ತದಿಗಾ ಹಾರೋಹಳ್ಳಿಗೆ ವರ್ಗಾವಣೆಯಾಗಿದ್ದರು. ಇವರ ಮೇಲೆ ಸೇವಾವಧಿಯಲ್ಲಿ ಆದಾಯಕ್ಕಿಂತ ಹೆಚ್ಚು ಆಸ್ತಿಯನ್ನು ಹೊಂದಿರುವ ಆರೋಪ ಕೇಳಿಬಂದಿತ್ತು. ಇದರ ಬೆನ್ನಲ್ಲೇ, ಲೋಕಾಯುಕ್ತ ಪೊಲೀಸರು ಅವರ ಮನೆ ಮತ್ತು ಕಚೇರಿ ಮೇಲೆ ದಾಳಿ ನಡೆಸಿದ್ದಾರೆ.
Leave a comment