ಭಾರಿ ತಾಲೂಕು ಆರೋಗ್ಯ ಅಧಿಕಾರಿ ಡಾ.ಡಿ.ಟಿ.ಮಂಜುನಾಥ ಸಲಹೆ
ಡೆಂಘೆ ನಿಯಂತ್ರಣ ಜಾಗೃತಿ
ಪ್ರತಿನಿಧಿ ವರದಿ ಶ್ರೀರಂಗಪಟ್ಟಣ
ಮಳೆಗಾಲದ ಸಂದರ್ಭದಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುವ ಡೆಂಘೆ ರೋಗ ನಿಯಂತ್ರಣಕ್ಕೆ ಸೂಕ್ತ ಮುನ್ನೆಚ್ಚರಿಕೆ ಅಗತ್ಯವಾಗಿದೆ ಎಂದು ಪ್ರಭಾರಿ ತಾಲೂಕು ಆರೋಗ್ಯ ಅಧಿಕಾರಿ ಡಾ.ಡಿ.ಟಿ.ಮಂಜುನಾಥ್ ಹೇಳಿದರು.
ತಾಲೂಕಿನ ಚಂದಗಾಲು ಗ್ರಾಮದಲ್ಲಿ ಗ್ರಾಪಂ, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಡೆಂಘೆ ನಿಯಂತ್ರಣ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವ ಜಾಗೃತಿ ಜಾಥ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಸಾರ್ವಜನಿಕರು ತಮ್ಮ ಮನೆಯ ಸುತ್ತ-ಮುತ್ತ ಬಿಸಾಡುವ ಘನ ತ್ಯಾಜ್ಯಗಳಲ್ಲಿ ನೀರು ನಿಂತಲ್ಲಿ ಸೊಳ್ಳೆಗಳು ಉತ್ಪತ್ತಿಯಾಗುತ್ತವೆ. ಆದ್ದರಿಂದ ಘನ ತ್ಯಾಜ್ಯಗಳನ್ನು ಸರಿಯಾಗಿ ವಿಲೇವಾರಿ ಮಾಡಿ. ಮನೆಯಲ್ಲಿಯ ನೀರು ಸಂಗ್ರಹಿಸುವ ಪರಿಕರಗಳನ್ನು ವಾರಕ್ಕೊಂದು ಸಾರಿ ಸ್ವಚ್ಛವಾಗಿ ಉಜ್ಜಿ ತೊಳೆದು ನೀರನ್ನು ಭರ್ತಿ ಮಾಡಿಕೊಳ್ಳಿ. ಹಾಗೆಯೆ ವಾರಕ್ಕೊಂದು ದಿನ ಒಣ ದಿನ ಆಚರಿಸಿ ಡೆಂಘೆ ಜ್ವರದ ಲಕ್ಷಣ ಕಂಡ ಕೂಡಲೇ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತ ಪರೀಕ್ಷೆ ಮಾಡಿಸಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಿ. ಡೆಂಘೆ ಜ್ವರ ನಿಯಂತ್ರಣ ಎಲ್ಲರ ಜವಾಬ್ದಾರಿ ಆಗಿದೆ ಎಂದು ಸಲಹೆ ನೀಡಿದರು.
ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಸಾರ್ವಜನಿಕರಿಗೆ ಕರಪತ್ರ ವಿತರಿಸಿ ಮುಖ್ಯಸರ್ಕಲ್ ನಲ್ಲಿ ಮಾನವ ಸರಪಳಿ ನಿರ್ಮಿಸಿ ಸಾರ್ವಜನಿಕರಿಗೆ ಅರಿವು ಮೂಡಿಸಿದರು.
ಗ್ರಾಪಂ ಅಧ್ಯಕ್ಷ ಜವರಪ್ಪ, ಸದಸ್ಯ ರಮೇಶ್, ಕುಮಾರ್, ಮುಖ್ಯ ಶಿಕ್ಷಕಿ ಭಾರತಿ, ಪಿಡಿಒ ಶಿಲ್ಪ,ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ.ಬೆನ್ನೂರ್, ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ.ಮೋಹನ್, ಆರೋಗ್ಯ ನಿರೀಕ್ಷಣಾಧಿಕಾರಿ ಕೃಷ್ಣೇಗೌಡ, ಸಮುದಾಯ ಆರೋಗ್ಯ ಅಧಿಕಾರಿ ಸಹನಾ, ಮೌಲ್ಯ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ವಿನಯಾ, ಶಾಲಾ ಶಿಕ್ಷಕರು, ಮಕ್ಕಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಜರಿದ್ದು.