ಇಂದು ಆಷಾಢ ಮಾಸದ ಮೂರನೇ ಶುಕ್ರವಾರ, ಬೆಟ್ಟದಲ್ಲಿ ಹಬ್ಬದ ಸಂಭ್ರಮ ಮನೆಮಾಡಿದೆ. ನಾಗಲಕ್ಷ್ಮಿ ಅಲಂಕಾರದಿಂದ ಕಂಗೊಳಿಸುತ್ತಿರುವ ತಾಯಿ ಚಾಮುಂಡಿ ದರ್ಶನಕ್ಕಾಗಿ ಮುಂಜಾನೆಯಿಂದಲೇ ಸರತಿ ಸಾಲಿನಲ್ಲಿ ನಿಂತು ದರ್ಶನ ಪಡೆಯುತ್ತಿದ್ದಾರೆ ಭಕ್ತರು.
ಆಷಾಢ ಶುಕ್ರವಾರದ ಹಿನ್ನೆಲೆ ಜಗನ್ಮಾತೆ ತಾಯಿ ಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ಚಾಮುಂಡಿ ಬೆಟ್ಟಕ್ಕೆ ಮುಂಜಾನೆಯಿಂದಲೇ ಭಕ್ತ ಸಾಗರ ಹರಿದು ಬಂದಿದೆ. ಮೂರನೇ ಆಷಾಢ ಶುಕ್ರವಾರದ ಪ್ರಯುಕ್ತ ತಾಯಿಗೆ ನಾಗಲಕ್ಷ್ಮಿ ಅಲಂಕಾರ ಮಾಡಲಾಗಿದ್ದು, ತಾಯಿ ಚಾಮುಂಡಿ ಹಸಿರು ಸೀರೆ ಉಟ್ಟು ಕಂಗೊಳಿಸಿದ್ದಾಳೆ.
ಇನ್ನು ಆಷಾಢ ಶುಕ್ರವಾರದ ಹಿನ್ನೆಲೆ ದೇವಸ್ಥಾನದ ಆವರಣವನ್ನು ವಿವಿಧ ಬಗೆಯ ಹೂವುಗಳಿಂದ ಅಲಂಕರಿಸಲಾಗಿದೆ. ಭಕ್ತರು ತಾಯಿಯನ್ನ ಕಣ್ತುಂಬಿಕೊಳ್ಳಲು ಮುಂಜಾನೆಯಿಂದಲೇ ಸರತಿ ಸಾಲಿನಲ್ಲಿ ನಿಂತು ದರ್ಶನ ಪಡೆಯುತ್ತಿದ್ದಾರೆ. ಹಾಗೂ ಆಷಾಢ ಮಾಸದ ಹಿನ್ನೆಲೆ ಬೆಳಿಗ್ಗೆಯಿಂದ ರಾತ್ರಿಯವರೆಗೂ ತಾಯಿಯ ದರ್ಶನಕ್ಕೆ ಅವಕಾಶವನ್ನ ಕಲ್ಪಿಸಲಾಗಿದೆ.
ಶನಿವಾರ(ಜುಲೈ 27)ರಂದು ಚಾಮುಂಡಿ ತಾಯಿಯ ವರ್ಧಂತಿ ಹಿನ್ನೆಲೆಯಲ್ಲಿ ನಾಳೆ ಬೆಳಿಗ್ಗೆ 8 ಗಂಟೆಯ ನಂತರ ಚಾಮುಂಡಿ ತಾಯಿಯ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು,ದರ್ಶನಕ್ಕೆ ಬರುವ ಭಕ್ತಾಧಿಗಳು ನಾಳೆ ಬೆಳಿಗ್ಗೆ 8 ಗಂಟೆಯ ನಂತರ ಬೆಟ್ಟಕ್ಕೆ ಬರುವಂತೆ ಚಾಮುಂಡಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ರೂಪ ಮನವಿ ಮಾಡಿದ್ದಾರೆ.