ಪ್ರತಿನಿಧಿ ವರದಿ ಮಡಿಕೇರಿ
ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಎಲ್ಲ ಪ್ರಕಟಣೆಗಳನ್ನು ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಆ.31 ರವರೆಗೆ ಶೇ.50 ರಿಯಾಯಿತಿಯ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಆನ್ಲೈನ್ ಮೂಲಕವೂ ಶೇ.50 ರಿಯಾಯಿತಿ ದರದಲ್ಲಿ ಪುಸ್ತಕಗಳನ್ನು ಖರೀದಿಸಬಹುದಾಗಿದೆ. ವೆಬ್ಸೈಟ್:http://www.kuvempubhashabharathi.karnataka/ ಓದುಗರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ ಎಂದು ಕುವೆಂಪು ಭಾಷಾಭಾರತಿ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.
ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಡಿಕೇರಿ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆಯಲು ಹಾಗೂ ಪುಸ್ತಕವನ್ನು ಖರೀದಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.