ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ‘TOXIC’ ಸಿನಿಮಾ ಮುಹೂರ್ತ ಸರಳವಾಗಿ ನೆರವೇರಿದೆ. ‘ಟಾಕ್ಸಿಕ್’ ಚಿತ್ರವನ್ನು ‘ಕೆವಿಎನ್ ಪ್ರೊಡಕ್ಷನ್ಸ್’ ಮೂಲಕ ಅದ್ದೂರಿಯಾಗಿ ನಿರ್ಮಾಣ ಮಾಡಲಾಗುತ್ತಿದೆ. ನಿರ್ಮಾಪಕ ವೆಂಕಟ್ ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ವೆಂಕಟ್ ಜೊತೆ ಇರೋ ಫೋಟೋ ಒಂದನ್ನ ಯಶ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ‘ಪಯಣ ಶುರುವಾಗಿದೆ’ ಎಂದು ಯಶ್ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಈ ಮೂಲಕ ‘ಟಾಕ್ಸಿಕ್’ ಸಿನಿಮಾದ ಶೂಟ್ ಇಂದಿನಿಂದ ಆರಂಭ ಆಗಿದೆ ಎಂಬುದನ್ನು ಅಧಿಕೃತ ಮಾಡಿದ್ದಾರೆ.
ಈ ಪೋಸ್ಟ್ಗೆ ಅರ್ಧಗಂಟೆಯಲ್ಲಿ ಎರಡೂವರೆ ಲಕ್ಷಕ್ಕೂ ಅಧಿಕ ಲೈಕ್ಸ್ ಸಿಕ್ಕಿದೆ. ಈ ಚಿತ್ರಕ್ಕೆ ಗೀತು ಮೋಹನ್ ದಾಸ್ ನಿರ್ದೇಶನ ಮಾಡಲಿದ್ದು, ಯಶ್ ನಟನೆಯ ಈ ಸಿನಿಮಾವನ್ನು ಕೆವಿಎನ್ ಸಂಸ್ಥೆ ನಿರ್ಮಾಣ ಮಾಡುತ್ತಿದೆ.ಯಶ್ ಯೋಚನೆ-ಯೋಜನೆ ಎರಡು ದೊಡ್ಡದು, ಇದಕ್ಕೆ ಕೈಗನ್ನಡಿ ಎಂಬಂತೆ ಯಶ್ ಅವರ ಮುಂದಿನ ಸಿನಿಮಾ ‘ಟಾಕ್ಸಿಕ್’ ಮೇಲೆ ಎಲ್ಲರ ಕಣ್ಣಿದೆ. ಜಗತ್ತು ಯಶ್ ಬಗ್ಗೆ ಮಾತನಾಡುತ್ತಿದೆ.ಕೆಜಿಎಫ್ ಸಿರೀಸ್ ನ ಪ್ರಚಂಡ ಯಶಸ್ಸಿನ ಬಳಿಕ ಯಶ್ ಟಾಕ್ಸಿಕ್ ಸಿನಿಮಾದಲ್ಲಿ ನಟನೆ ಮಾಡ್ತಿದ್ದಾರೆ. ಕಳೆದ 1.5 ವರ್ಷದಿಂದ ಇದೇ ಸಿನಿಮಾದ ಕೆಲಸದಲ್ಲಿ ಯಶ್ ಬ್ಯುಸಿ ಆಗಿದ್ದಾರೆ. ಇಂಟರ್ ನ್ಯಾಷನಲ್ ಸ್ಟ್ಯಾಂಡರ್ಡ್ ಲೆವೆಲ್ ನಲ್ಲಿ ಸಿನಿಮಾ ಚಿತ್ರೀಕರಣ ನಡೆಸಲು ಭರ್ಜರಿ ಯೋಜನೆ ಹಾಕಿಕೊಳ್ಳಲಾಗಿದೆ. ಚಿತ್ರದ ಅನೌನ್ಸ್ ಮೆಂಟ್ ವೇಳೆ ಬಿಡುಗಡೆಯಾಗಿದ್ದ ಮೋಷನ್ ಪೋಸ್ಟರ್ ದೊಡ್ಡ ಮಟ್ಟದಲ್ಲಿ ವೈರಲ್ ಆಗಿತ್ತು. ಯಶ್ ಲುಕ್ ಅಂಡ್ ಮ್ಯಾನರಿಸಂ ಗೆ ಎಲ್ಲೆಡೆಯಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿತ್ತು.