ಪ್ರತಿನಿಧಿ ವರದಿ ಅರಸೀಕೆರೆ
ತಾಲೂಕಿನ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿಯಿರುವ 45 ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಹಾಗೂ 126 ಅಂಗನವಾಡಿ ಕೇಂದ್ರಗಳಿಗೆ ಸಹಾಯಕಿ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ವೆಬ್ ಸೈಟ್ ವಿಳಾಸ: https://karnemakaone.kar.nic.in/abcd/ ಆಗಿದ್ದು, ಅರ್ಜಿ ಸಲ್ಲಿಸಲು ಸೆ.4 ಕೊನೆಯ ದಿನಾಂಕವಾಗಿರುತ್ತದೆ. ಆಯಾ ಅಂಗನವಾಡಿ ಕೇಂದ್ರದ ಸರ್ವೇ ವ್ಯಾಪ್ತಿಗೆ ಒಳಪಡುವ ಸ್ಥಳೀಯರಿಗೆ ಮಾತ್ರ ಆದ್ಯತೆಯಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಯಲ್ಲಿ ಸಂಪರ್ಕಿಸಲು ಕೋರಿದೆ.