ಚಿಕ್ಕಮಗಳೂರು: ತೋಟಗಾರಿಕೆ ಇಲಾಖೆಯಿಂದ 2024 ಮುಂಗಾರು ಹಂಗಾಮಿಗೆ ಜಿಲ್ಲೆಯಲ್ಲಿ ಹವಮಾನ ಆಧಾರಿತ ಬೆಳೆ ವಿಮಾ ಯೋಜನೆಗೆ (WBCIS) ಚಿಕ್ಕಮಗಳೂರು, ಕಡೂರು, ಕೊಪ್ಪ, ಮೂಡಿಗೆರೆ, ಕಳಸ, ನ.ರಾ.ಪುರ, ಶೃಂಗೇರಿ, ತರೀಕೆರೆ ಹಾಗೂ ಅಜ್ಜಂಪುರ ತಾಲೂಕುಗಳಲ್ಲಿ ವಿಮಾ ಯೋಜನೆಗೆ ಬೆಳೆಸಾಲ ಪಡೆದ ಹಾಗೂ ಸಾಲ ಪಡೆಯದ ರೈತರು ಮುಂಗಾರು ಹಂಗಾಮಿನ ತೋಟಗಾರಿಕೆ ಬೆಳೆಗಳಿಗೆ ಬ್ಯಾಂಕುಗಳಲ್ಲಿ ಅರ್ಜಿ ಆಹ್ವಾನಿಸಿದ ಅವಧಿಯನ್ನು ಆ.16ರ ವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ IFFCO TOKIO ಕಂಪನಿ ಇನ್ಯೂರೆನ್ಸ್ ಪ್ರತಿನಿಧಿ ಮೊ.ಸಂ. 9738730027, ವ್ಯವಸ್ಥಾಪಕರು, ಲೀಡ್ ಬ್ಯಾಂಕ್ ಮೊ.ಸಂ. 8197199544, ಚಿಕ್ಕಮಗಳೂರು, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ) ಮೊ.ಸಂ. 8277078696, ಕಡೂರು, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ) ಮೊ.ಸಂ. 9380794610, ಕೊಪ್ಪ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಮೊ.ಸಂ. 97407595597, ಮೂಡಿಗೆರೆ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಮೊ.ಸಂ. 8310907638, ನರಸಿಂರಾಜಪುರ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಮೊ.ಸಂ. 9449759777, ಶೃಂಗೇರಿ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಮೊ.ಸಂ. 7892274331, ತರೀಕೆರೆ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಮೊ.ಸಂ. 9980007438 ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಚಿಕ್ಕಮಗಳೂರು ತೋಟಗಾರಿಕೆ ಉಪ ನಿರ್ದೇಶಕರು (ಜಿ.ಪಂ.) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ:
ಚಿಕ್ಕಮಗಳೂರು: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಅ.1 ರಂದು ವಿಶ್ವ ಹಿರಿಯ ನಾಗರೀಕರ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ಆಚರಿಸುವ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ (ಶಿಕ್ಷಣ ಕ್ಷೇತ್ರ, ಸಾಹಿತ್ಯ ಕ್ಷೇತ್ರ, ಕಾನೂನು, ಪ್ರತಿಭೆ, ಕ್ರೀಡೆ ಮತ್ತು ಹಿರಿಯ ನಾಗರೀಕರ ಕ್ಷೇತ್ರದಲ್ಲಿ ಸಮಾಜ ಸೇವೆ) ಕಾರ್ಯನಿರ್ವಹಿಸುತ್ತಿರುವ ಹಿರಿಯ ನಾಗರಿಕರು ಹಾಗೂ ಸ್ವಯಂ ಸೇವಾ ಸಂಸ್ಥೆಗಳಿಂದ ರಾಜ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಆ.31 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿಯ ವೆಬ್ ಸೈಟ್ www.dwdsc.karnataka.gov.inನ್ನು ಹಾಗೂ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ದೂ. ಸಂ.08262-228171 ನ್ನು ಸಂಪರ್ಕಿಸಬಹುದಾಗಿದೆ ಎಂದು ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.