ಚಿಕ್ಕಮಗಳೂರು: ಕರ್ನಾಟಕ ಸರ್ಕಾರದ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆಯನ್ನು 2023 ಡಿ.26ರಿಂದ ಪ್ರಾರಂಭಿಸಿದ್ದು, 2022-23ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಮಾಡಿ 2023ರಲ್ಲಿ ತೇರ್ಗಡೆಯಾದ ಪದವಿಧರರಿಗೆ 3000 ರೂ. ಮತ್ತು ಡಿಪ್ಲೊಮೊ ತೇರ್ಗಡೆಯಾದವರಿಗೆ 1500 ರೂ. ನಿರುದ್ಯೋಗ ಭತ್ಯೆಯನ್ನು ಪ್ರತಿ ತಿಂಗಳು 2 ವರ್ಷದವರೆಗೆ ನೀಡಲಾಗುತ್ತದೆ.
ಆಸಕ್ತ ಅರ್ಹ ಅಭ್ಯರ್ಥಿಗಳು ಸೇವಾ ಸಿಂಧು ಜಾಲತಾಣವಾದ https://sevasindhugs.karnataka.gov.in ಅಥವಾ ಕರ್ನಾಟಕ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಕಚೇರಿಯ ದೂರವಾಣಿ ಸಂಖ್ಯೆ: 08262-295538 ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a comment