ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ಕೊಚ್ಚಿ ಹೋಗಿದೆ. ಇದರಿಂದ ಅಪಾರ ಪ್ರಮಾಣ ನೀರು ಹರಿದು ಹೋಗುತ್ತಿರುವ ಹಿನ್ನೆಲೆಯಲ್ಲಿ ನದಿಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆಯನ್ನು ನೀಡಲಾಗಿದೆ. ನದಿಪಾತ್ರದ ಗ್ರಾಮಗಳಲ್ಲಿ ಡಂಗುರ ಸಾರಿ ಎಚ್ಚರಿಸಲಾಗಿದೆ. ಟಿಬಿ ಡ್ಯಾಮ್ ಕೆಳಭಾಗದ ಕೊಪ್ಪಳ ತಾಲೂಕು, ಗಂಗಾವತಿ ತಾಲೂಕು, ಕಾರಟಗಿ ತಾಲೂಕಿನ ಗ್ರಾಮಗಳಲ್ಲಿ ಡಂಗುರ ಸಾರುವ ಮೂಲಕ ಎಚ್ಚರಿಕೆಯನ್ನ ನೀಡಲಾಗಿದೆ.
ಭಾನುವಾರ ಜಲಾಶಯಕ್ಕೆ ಭೇಟಿ ನೀಡಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ಜಲಾಶಯ ಗೇಟ್ ದುರಸ್ತಿಪಡಿಸಲು ಇನ್ನು ಒಂದು ವಾರ ಕಾಯಲೇಬೇಕು ಎಂದು ತಿಳಿಸಿದ್ದಾರೆ. ಸದ್ಯ ನೀರಿನ ಹರಿವು ಹೆಚ್ಚಿರುವುದರಿಂದ ಈಗಲೇ ದುರಸ್ತಿಗೆ ಮುಂದಾದರೆ ತುಂಗಭದ್ರಾ ಆಣೆಕಟ್ಟೆಗೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ತಜ್ಞರು ಎಚ್ಚರಿಸಿದ್ದ ಹಿನ್ನಲೆಯಲ್ಲಿ ಸ್ವಲ್ಪ ಪ್ರಮಾಣದ ನೀರು ಖಾಲಿ ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಜಿಲ್ಲೆಯ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ಕೊಚ್ಚಿ ಹೋಗಿದೆ. ಇದರಿಂದ ಅಪಾರ ಪ್ರಮಾಣ ನೀರು ಹರಿದು ಹೋಗುತ್ತಿದೆ. ನದಿ ಸಮೀಪ ಮಕ್ಕಳನ್ನು, ಜಾನುವಾರುಗಳನ್ನು ಬಿಡಬಾರದು ಎಂದು ಎಚ್ಚರಿಕೆ ನೀಡಲಾಗಿದ್ದು, ಜನರು ಕೂಡಾ ನದಿ ಬಳಿ ತೆರಳದಂತೆ ಸೂಚಿಸಲಾಗಿದೆ. ಯಾವುದೇ ಕಾರಣಕ್ಕೂ ನದಿಗೆ ಇಳಿಯದಂತೆ ಜಿಲ್ಲಾಡಳಿತ ತಿಳಿಸಿದೆ. ʼʼನದಿ ಸಮೀಪಕ್ಕೆ ಮಕ್ಕಳು, ಜಾನುವಾರುಗಳು ಹೋಗದಂತೆ ಎಚ್ಚರವಹಿಸಿ. ಟಿಬಿ ಡ್ಯಾಮ್ನಿಂದ ಅಪಾರ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದೆ. ಯಾರೂ ಕೂಡ ನದಿ ಪಾತ್ರಕ್ಕೆ ಹೋಗಬೇಡಿʼʼ ಎಂದು ಟಿಬಿ ಡ್ಯಾಮ್ ಕೆಳಭಾಗದ ಕೊಪ್ಪಳ ತಾಲೂಕು, ಗಂಗಾವತಿ ತಾಲೂಕು, ಕಾರಟಗಿ ತಾಲೂಕಿನ ಗ್ರಾಮಗಳಲ್ಲಿ ಡಂಗುರ ಸಾರಿ ಗ್ರಾಮಸ್ಥರಿಗೆ ಸೂಚನೆ ನೀಡಲಾಗಿದೆ.
ಭಾನುವಾರ ಜಲಾಶಯಕ್ಕೆ ಭೇಟಿ ನೀಡಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ಜಲಾಶಯ ಗೇಟ್ ದುರಸ್ತಿಪಡಿಸಲು ಇನ್ನು ಒಂದು ವಾರ ಕಾಯಲೇಬೇಕು ಎಂದು ತಿಳಿಸಿದ್ದಾರೆ. ಸದ್ಯ ನೀರಿನ ಹರಿವು ಹೆಚ್ಚಿರುವುದರಿಂದ ಈಗಲೇ ದುರಸ್ತಿಗೆ ಮುಂದಾದರೆ ತುಂಗಭದ್ರಾ ಆಣೆಕಟ್ಟೆಗೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ತಜ್ಞರು ಎಚ್ಚರಿಸಿದ್ದ ಹಿನ್ನಲೆಯಲ್ಲಿ ಸ್ವಲ್ಪ ಪ್ರಮಾಣದ ನೀರು ಖಾಲಿ ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಸರ್ಕಾರ ತಂತ್ರಜ್ಞರನ್ನು ಕರೆಸಿ ಗೇಟ್ ರಿಪೇರಿ ಮಾಡಿಸುವ ಪ್ರಯತ್ನದಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಏನೇ ಕ್ರಮ ಕೈಗೊಂಡರೂ ಗೇಟ್ ದುರಸ್ತಿಗೆ ಒಂದು ವಾರ ಬೇಕೇ ಬೇಕು ಎಂದು ಮೂಲಗಳು ಹೇಳಿವೆ. ಹೀಗಾಗಿ ಇದಕ್ಕೆಲ್ಲ ಕಾರಣ ಆಗಿರುವ ಅಧಿಕಾರಿಗಳ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ರೈತರು ಆಗ್ರಹಿಸಿದ್ದಾರೆ. ಇಡೀ ಘಟನೆಗೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎನ್ನುವುದು ಮೇಲ್ನೋಟಕ್ಕೆ ಈಗಾಗಲೇ ಸಾಬೀತಾಗಿದೆ. ಗೇಟ್ಗಳ ಪರಿಶೀಲನೆ, ನಿರ್ವಹಣೆಯಲ್ಲಿ ಟಿಬಿ ಬೋರ್ಡ್ ಅಧಿಕಾರಿಗಳು ಎಡವಿದ್ದಾರೆ ಎಂದು ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.