ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ ಹಿನ್ನೆಲೆ ರಾಜ್ಯಪಾಲರ ವಿರುದ್ಧ ಸಿಎಂ ಸಿದ್ದರಾಮಯ್ಯ ತವರೂರು ಮೈಸೂರಿನಲ್ಲಿ ಪ್ರತಿಭಟನೆ ನಡೆದಿದೆ. ಹಿಂದುಳಿದ ವರ್ಗಗಳ ಅಧ್ಯಕ್ಷ ಕೆ ಶಿವರಾಂ ನೇತೃತ್ವದಲ್ಲಿ ಮೈಸೂರಿನ ನ್ಯಾಯಾಲಯದ ಮುಂಭಾಗ ಪ್ರತಿಭಟನೆ ನಡೆಸಿದ್ದಾರೆ.
ರಾಜ್ಯಪಾಲರ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ ಪ್ರತಿಭಟನಾಕಾರರು, ರಾಜ್ಯಪಾಲರು ಕೇಂದ್ರ ಸರ್ಕಾರದ ಏಜೆಂಟ್ ಹಾಗೂ ಕೈಗೊಂಬೆ ಎಂದು ಘೋಷಣೆ ಕೂಗಿ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಅಲ್ಲದೆ ಮೋದಿ ಸೇವಕರಂತೆ ರಾಜ್ಯಪಾಲರು ಕೆಲಸ ನಿರ್ವಹಿಸುತ್ತಿದ್ದಾರೆಂದು ಆರೋಪಸಿದ್ದಾರೆ.
ಪ್ರತಿಭಟನೆ ವೇಳೆ ಪೊಲೀಸರೊಂದಿಗೆ ಪ್ರತಿಭಟನಾಕಾರರು ವಾಗ್ವಾದಕ್ಕಿಳಿದಿದ್ದು, ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯಲು ಪೊಲೀಸರು ಮುಂದಾಗಿದ್ದರು. ಆದರೂ ಪಟ್ಟುಬಿಡದೇ ಪ್ರತಿಭಟನೆ ಮುಂದುವರಿಸಿದ ಪ್ರತಿಭಟನಾಕಾರರು, ರಾಜ್ಯಪಾಲರ ವಿರುದ್ಧ ಆಕ್ರೋಶವನ್ನ ಹೊರ ಹಾಕಿದ್ದಾರೆ.