ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಬೆನ್ನಲ್ಲೆ ಸಿಎಂ ಸಿದ್ದರಾಮಯ್ಯ ಬೆಂಬಲಿಗರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ರಾಜ್ಯಪಾಲರ ನಡೆಯನ್ನು ವ್ಯಾಪಕವಾಗಿ ಖಂಡಿಸಿದ್ದಾರೆ. ಅಂತೆಯೇ ಇಂದು ರಾಜ್ಯಪಾಲರ ನಡೆಯನ್ನ ಖಂಡಿಸಿ ಟಿ ನರಸೀಪುರದಲ್ಲಿ ಕಾಂಗ್ರೆಸ್ ಪಕ್ಷದಿಂದ ಬೃಹತ್ ಪ್ರತಿಭಟನೆ ನಡೆಸಲಾಗಿದೆ.
ಟಿ ನರಸೀಪುರ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಾಗಿದ ಪ್ರತಿಭಟನಾ ಮೆರವಣಿಗೆಯಲ್ಲಿ, ನೂರಾರು ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿದ್ದರು. ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಅನುಮತಿ ನೀಡಿದ ಹಿನ್ನೆಲೆ ಅಕ್ರೋಶಗೊಂಡಿರುವ ಪ್ರತಿಭಟನಾಕಾರರು, ರಾಜ್ಯಪಾಲರ ವಿರುದ್ಧ ದಿಕ್ಕಾರ ಕೂಗಿ, ಟೈರ್ ಗಳಿಗೆ ಬೆಂಕಿ ಹಚ್ಚಿ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
ಈ ವೇಳೆ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಪೋಲೀಸ್ ಇಲಾಖೆಯಿಂದ ಬಿಗಿ ಬಂದೋಬಸ್ತ್ ಮಾಡಲಾಗಿತ್ತು.