ಬೆಂಗಳೂರು: ನಟ ದರ್ಶನ್ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿ ಎರಡು ತಿಂಗಳುಗಳ ಮೇಲಾಗಿದೆ. ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಡಿ ಬಾಸ್ ಗೆ ರಾಜಾತಿಥ್ಯ ನೀಡಲಾಗುತ್ತಿರುವ ಫೋಟೊವೊಂದು ಭಾನುವಾರ ಸಂಜೆಯಿಂದ ಎಲ್ಲೆಡೆ ವೈರಲ್ ಆಗಿತ್ತು.
ಘಟನೆ ಬಗ್ಗೆ ಎಚ್ಚೆತ್ತ ಗೃಹಸಚಿವ ಜಿ.ಪರಮೇಶ್ವರ್ 7 ಮಂದಿ ಅಧಿಕಾರಿಗಳನ್ನ ಅಮಾನತು ಮಾಡಲಾಗಿದೆ ಎಂದು ತಿಳಿಸಿದ್ದರು. ಇದೀಗ ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಒಂದನ್ನ ಶೇರ್ ಮಾಡಿದ್ದು, ನಟ ದರ್ಶನ್ ವಿರುದ್ಧ ಮತ್ತೊಂದು ಕ್ರಮ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಮತ್ತಿತರರಿಗೆ ರಾಜಾತಿಥ್ಯ ಒದಗಿಸುತ್ತಿರುವ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡುವಂತೆ ಸೂಚಿಸಿದ್ದೇನೆ. ದರ್ಶನ್ ಮತ್ತು ಇತರರನ್ನು ಕೂಡಲೇ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆ ಹಾಗೂ ಕಾರಾಗೃಹಕ್ಕೆ ಭೇಟಿ ನೀಡಿ ಪ್ರಕರಣದ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತನ್ನ ಎಕ್ಸ್ ಖಾತೆಯಲ್ಲಿ ಬರೆದಿದ್ದಾರೆ.
https://x.com/siddaramaiah/status/1827958229348892896?t=N2bbEFHfhdxtDtIZj8Iiyg&s=08