ಪ್ರತಿನಿಧಿ ವರದಿ ಮಂಗಳೂರು
ಶೆಫ್ ಟಾಕ್ ಸೀಸನ್ -2 ಕಬಡ್ಡಿ ಪ್ರೀಮಿಯರ್ ಲೀಗ್ ಆ.30 ರಿಂದ ಸೆ.1ರವರೆಗೆ ನಡೆಯಲಿದ್ದು ಆ.30ರಂದು ಆಹಾರೋತ್ಸವದ ಉದ್ಘಾಟನೆ ನಡೆಯಲಿದೆ.
ಮಹಾನಗರ ಪಾಲಿಕೆಯ ಮೇಯರ್ ಸುಧೀರ್ ಶೆಟ್ಟಿ ಉದ್ಘಾಟಿಸಲಿದ್ದಾರೆ. ಆ.31ರಂದು ಕಬಡ್ಡಿ ಪಂದ್ಯಾಟದ ಉದ್ಘಾಟನೆ ನಡೆಯಲಿದ್ದು, ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ ವೇದವ್ಯಾಸ ಕಾಮತ್ ಉದ್ಘಾಟಿಸಲಿದ್ದಾರೆ ಎಂದು ಕಾರ್ಯಕ್ರಮ ಆಯೋಜಕ ಸುದೇಶ್ ಭಂಡಾರಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಗೌರವ ಸಲಹೆಗಾರ ವಿಶ್ವಾಸ್ ದಾಸ್ ಮಾತಾಡಿ, ಕಳೆದ ವರ್ಷ ನಡೆದ ಸೀಸನ್-1 ಅತ್ಯಂತ ಯಶಸ್ವಿಯಾಗಿ ನಡೆದಿದ್ದು, ಈ ವರ್ಷ ಗೌರವಾಧ್ಯಕ್ಷ ಪ್ರಕಾಶ್ ಕುಂಪಲ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದೇವೆ. ಕಬಡ್ಡಿ ಟೂರ್ನಮೆಂಟ್ ಜತೆಗೆ ಈ ಬಾರಿ ಆಹಾರೋತ್ಸವ ಮತ್ತು ವಿನೋದ ಮೇಳವನ್ನು ಕೂಡಾ ಆಯೋಜಿಸಿದ್ದೇವೆ ಎಂದರು.
ಮಾಜಿ ಶಾಸಕರು ಬಿಎ ಮೊಯಿದೀನ್ ಬಾವಾ ಮಾತಾಡಿ, ಈ ವರ್ಷ ಕಬಡ್ಡಿ ಟೂರ್ನಮೆಂಟ್ನಲ್ಲಿ 8 ತಂಡಗಳು ಭಾಗವಹಿಸುತ್ತಿವೆ. ಈ ತಂಡಗಳ ಆಟಗಾರರನ್ನು ಆ.20ರಂದು ಸೀವೂ ಹೋಟೆಲ್ನಲ್ಲಿ ನಡೆದ ಹರಾಜು ಮೂಲಕ ಆಯ್ಕೆ ಮಾಡಲಾಗಿತ್ತು, ಒಟ್ಟು 99 ಆಟಗಾರರು ಆಯ್ಕೆಯಾಗಿದ್ದಾರೆ. ಈ ವರ್ಷ ನಾವು 100+ ಆಹಾರ ಮಳಿಗೆಗಳನ್ನು ನಿರೀಕ್ಷಿಸುತ್ತಿದ್ದೇವೆ. ಅವು ವಿವಿಧ ರೀತಿಯ ರುಚಿಕರ ಆಹಾರಗಳನ್ನು ಒದಗಿಸುತ್ತವೆ. ಮಂಗಳೂರು ಕಬಡ್ಡಿ ಪ್ರೀಮಿಯರ್ ಲೀಗ್ ಸೀಸನ್-2 ರಲ್ಲಿ 2 ಲಕ್ಷಕ್ಕಿಂತ ಹೆಚ್ಚು ವೀಕ್ಷಕರನ್ನು ನಿರೀಕ್ಷಿಸಲಾಗಿದ್ದು ಇದು ದಕ್ಷಿಣ ಭಾರತದ ಅತ್ಯಂತ ದೊಡ್ಡ ಈವೆಂಟ್ ಆಗಿರುವುದರ ನಿರೀಕ್ಷೆ ಇದೆ ಎಂದು ತಿಳಿಸಿದರಿ.
ಹರೀಶ್ ನಾಯಕ್, ಅಝ್ಪರ್ ರಜಾಕ್, ಕರುಣಾಕರ್, ಹಮೀದ್ ಅಮ್ಮಿ, ದೀಪಕ್ ಪಿಲಾರ್, ವಿನೋದ್ ಶೆಟ್ಟಿ, ಸುಕೇಶ್ ಭಂಡಾರಿ ಮತ್ತಿತರರು ಉಪಸ್ಥಿತರಿದ್ದರು.