ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಹಿನ್ನೆಲೆ ರಾಜ್ಯಪಾಲರ ವಿರುದ್ಧ ಮೈಸೂರಿನಲ್ಲಿ ಇಂದು ಪ್ರತಿಭಟನೆ ನಡೆದಿದೆ. ದಲಿತ ಸಂಘರ್ಷ ಸಮಿತಿ ವತಿಯಿಂದ ಮೈಸೂರಿನ ಟೌನ್ ಹಾಲ್ ಆವರಣದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಟೌನ್ ಹಾಲ್ ಆವರಣದಲ್ಲಿರುವ ಡಾ ಬಿ ಆರ್ ಅಂಬೇಡ್ಕರ್ ಪ್ರತಿಮೆ ಮುಂಭಾಗ ಜಮಾಯಿಸಿದ್ದ ಪ್ರತಿಭಟನಾಕಾರರು ಬಿಜೆಪಿ, ಜೆಡಿಎಸ್ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮುಡಾ ಹಗರಣದ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ದ ವಿಪಕ್ಷಗಳು ರಾಜಿನಾಮೆ ನೀಡುವಂತೆ ಪಟ್ಟು ಹಿಡಿದಿವೆ. ಇತ್ತ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿಚಾರಣೆಗಾಗಿ ಇಂದು ಕೋರ್ಟ್ ಗೆ ಹಾಜರಾಗಿದ್ದಾರೆ.