ಗ್ರಾಮೀಣ ಭಾಗದ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ಸಿಗುವಂತಾಗಬೇಕು. ಉತ್ತಮ ಸಮಾಜ ನಿರ್ಮಾಣಕ್ಕೆ ನಮ್ಮ ಸಹಕಾರ ಇದ್ದೇ ಇರುತ್ತದೆ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ವಿಧಾನಪರಿಷತ್ ಸದಸ್ಯ ಡಾ ಯತೀಂದ್ರ ಇಂದು ವಿದ್ಯಾರ್ಥಿಗಳಿಗೆ ಕರೆ ನೀಡಿದ್ದಾರೆ.
ವರುಣಾ ಕ್ಷೇತ್ರದ ಲಲಿತಾದ್ರಿಪುರ ಸರ್ಕಾರಿ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಲೋಕೋಪಯೋಗಿ ಇಲಾಖೆ ವತಿಯಿಂದ ನೂತನ ಶಾಲಾ ಕೊಠಡಿ ನಿರ್ಮಿಸಲಾಗಿದೆ. ನೂತನ ಕೊಠಡಿಯ ಉದ್ಘಾಟನೆ ಮಾಡಿ ಮಾತನಾಡಿದ ಅವರು, ಗ್ರಾಮೀಣ ಭಾಗದ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ಸಿಗುವಂತಾಗಬೇಕು, ಉತ್ತಮ ಸಮಾಜ ನಿರ್ಮಾಣಕ್ಕೆ ನಮ್ಮ ಸಹಕಾರ ಇದ್ದೇ ಇರುತ್ತದೆ. ನಮ್ಮ ಸರ್ಕಾರದ ಅವಧಿಯಲ್ಲಿ ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಆದ್ಯತೆ ನೀಡಲಾಗ್ತಿದೆ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದ್ದಾರೆ.