ನಾಲ್ವರಿಗೆ ಗಂಭೀರ ಗಾಯ
ಪ್ರತಿನಿಧಿ ವರದಿ ಹಾಸನ
ಚನ್ನರಾಯಪಟ್ಟಣ ಬೈಪಾಸ್ ರಾಷ್ಟ್ರೀಯ ಹೆದ್ದಾರಿ-75ಯಲ್ಲಿ ಮೃತದೇಹ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ ಹಾಗೂ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಆಪೆ ಆಟೋ ನಡುವೆ ಮುಖಮುಖಿ ಡಿಕ್ಕಿ ಸಂಭವಿಸಿ ಆಟೋದಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡದರೆ.
ಗಾಯಾಳುಗಳನ್ನು ಹಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಕಾರ್ಮಿಕರೆಲ್ಲರೂ ಸ್ಥಳೀಯರು ಎನ್ನಲಾಗಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ಮೃತದೇಹ ಕೊಂಡೊಯ್ಯುತ್ತಿದ್ದ ಅಂಬ್ಯುಲೆನ್ಸ್ ಚನ್ನರಾಯಪಟ್ಟಣದಿಂದ ಬಾಗೂರು ಕಡೆಗೆ ಶುಂಠಿ, ಕೀಳಲು ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಅಪೆ ಆಟೋ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.
ಅಂಬ್ಯುಲೆನ್ಸ್ನಲ್ಲಿದ್ದ ಮೃತದೇಹವನ್ನು ಮತ್ತೊಂದು ಅಂಬ್ಯುಲೆನ್ಸ್ ಮೂಲಕ ಮಂಗಳೂರಿಗೆ ಕಳಿಸುವ ವ್ಯವಸ್ಥೆ ಮಾಡಲಾಯಿತು. ಸ್ಥಳಕ್ಕೆ ಚನ್ನರಾಯಪಟ್ಟಣ ಸಂಚಾರ ಪೊಲೀಸ್ ಠಾಣೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದು, ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.