ಪ್ರತಿನಿಧಿ ವರದಿ ಚಿಕ್ಕಮಗಳೂರು
ಜಿಲ್ಲಾ ಪಂಚಾಯಿತಿ, ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆ ವತಿಯಿಂದ ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಅಂಗವಾಗಿ ಸಾಕ್ಷರತೆ ಮಹತ್ವ, ಸಾಕ್ಷರತೆ ಮೂಲಕ ನಿರಂತರ ಕಲಿಕೆ ಮತ್ತು ಕೌಶಲ್ಯ ಅಭಿವೃದ್ಧಿ ಕುರಿತು ಜನ ಸಾಮಾನ್ಯರಲ್ಲಿ ಅರಿವು ಮೂಡಿಸುವ ಹಾಗೂ ಉತ್ತಮ ಕಲಿಕೆಯ ವಾತಾವರಣ ಸೃಷ್ಟಿಸಲು ಸೆ.9 ರಂದು ಬೆಳಗ್ಗೆ 10ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆಯನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.