ಪ್ರತಿನಿಧಿ ವರದಿ ಕೊಳ್ಳೇಗಾಲ
ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ(ಟಿಎಪಿಸಿಎಂಎಸ್)ದ 2023-24ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಸೆ.17 ರಂದು ಬೆಳಗ್ಗೆ 11 ಗಂಟೆಗೆ ಸಂಘದ ಅಧ್ಯಕ್ಷ ಬಿ.ಚಿಕ್ಕಮಾದನಾಯ್ಕ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಟಿಎಪಿಸಿಎಂಎಸ್ ಸಂಘದ ಆವರಣದಲ್ಲಿ ಆಯೋಜಿಸಿರುವ ಈ ವಾರ್ಷಿಕ ಮಹಾಸಭೆಯಲ್ಲಿ ಸಂಘದ ನಿರ್ದೇಶಕರು ಹಾಗೂ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಸಂಘದ ಪ್ರಬಾರ ಕಾರ್ಯದರ್ಶಿ ಟಿ.ಲಿಂಗರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.