ಪ್ರತಿನಿಧಿ ವರದಿ ಕೊಳ್ಳೇಗಾಲ
ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಗೃಹಿಣಿ ಶುಕ್ರವಾರ ಬೆಳಗ್ಗೆ ಮನೆಯಲ್ಲಿ ನೇಣಿಗೆ ಶರಣಾಗಿದ್ದು, ಈ ಸಂಬಂಧ ಗ್ರಾಮಾಂತರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಮುಳ್ಳೂರು ಗ್ರಾಮದ ನಾಯಕರ ಬೀದಿ ನಿವಾಸಿ ಸುರೇಶ್ ನಾಯಕ ಅವರ ಪತ್ನಿ ಯಶೋಧ(55) ಮೃತ ಗೃಹಿಣಿ. ಈಕೆ ಮನೆಯಲ್ಲಿ ಯಾರು ಇಲ್ಲದ ವೇಳೆ ಜಿಗುಪ್ಸೆ ಹಿನ್ನೆಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಸಂಬಂಧ ಮೃತಳ ಪತಿ ಸುರೇಶ್ ನಾಯಕ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹೇಳಿಕೆ ದಾಖಲಿಸಿದ್ದಾರೆ.