CPI(M) ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ರಾಜ್ಯಸಭಾ ಸಂಸದ ಸೀತಾರಾಂ ಯೆಚೂರಿ ವಿಧಿವಶರಾಗಿದ್ದಾರೆ. 72 ವರ್ಷದ ಸೀತರಾಂ ಯೆಚೂರಿ ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ತೀವ್ರ ಉಸಿರಾಟದ ಸೋಂಕಿನಿಂದ ಬಳಲುತ್ತಿದ್ದ ಅವರನ್ನು ಇತ್ತೀಚೆಗೆ ದೆಹಲಿಯ ಏಮ್ಸ್ ನ ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿತ್ತು.
ಕಳೆದ ಕೆಲವು ದಿನಗಳಿಂದ ಅವರು ವೆಂಟಿಲೇಟರ್ ಸಹಾಯದಿಂದ ಉಸಿರಾಡುತ್ತಿದ್ದರು. ಈಗ ಚಿಕಿತ್ಸೆ ಫಲಿಸದೆ ಯೆಚೂರಿ ನಿಧನರಾಗಿದ್ದಾರೆ. ಹಿರಿಯ ರಾಜಕೀಯ ಮುತ್ಸದ್ದಿ ನಿಧನಕ್ಕೆ ಎಲ್ಲೆಡೆಯಿಂದ ತೀವ್ರ ಸಂತಾಪ ವ್ಯಕ್ತವಾಗಿದೆ. ಎಡಪಂಥೀಯರ ಪ್ರಮುಖ ಧ್ವನಿ ಅಡಗಿದೆ ಅಂತ ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ.