ಕೆ ಆರ್ ನಗರ ಜಂಗಲ್ ರಾಜ್ಯದಂತಾಗಿದೆ ಎಂದು ಮಾಜಿ ಎಂಎಲ್ಸಿ ಕೆ ಸಿ ಪುಟ್ಟಸಿದ್ದಶೆಟ್ಟಿ ಕಳವಳ ಹೊರಹಾಕಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಇತ್ತೀಚೆಗಷ್ಟೇ ಕೆ ಆರ್ ನಗರದಲ್ಲಿ ಹಾಡುಹಗಲೇ ಯುವಕನಿಗೆ ಚಾಕುವಿನಿಂದ ಇರಿಯಲಾಗಿದೆ. ಆಗಾಗ್ಗೆ ಇಂತಹ ಪ್ರಕರಣಗಳು ಮರುಕಳಿಸುತ್ತಲಿವೆ. ಆದರೂ ತಪ್ಪಿತಸ್ಥರ ವಿರುದ್ಧ ಪೊಲೀಸರು ಕಠಿಣ ಕ್ರಮ ತೆಗೆದುಕೊಳ್ಳುತ್ತಿಲ್ಲ. ಪರಿಣಾಮ ಜನಸಾಮಾನ್ಯರು ಜೀವಭಯದಲ್ಲಿ ಬದುಕುವಂತಾಗಿದೆ ಎಂದಿದ್ದಾರೆ.
ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಈಗಲಾದರೂ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡು ಜನನಿಬಿಡ ಪ್ರದೇಶದಲ್ಲಿ ಹೆಚ್ಚಿನ ಸಿಬ್ಬಂದಿಗಳನ್ನು ನಿಯೋಜಿಸಬೇಕು. ಸಮಾಜಘಾತುಕರು, ರೌಡಿ ಶೀಟರ್ ಗಳನ್ನು ಕೆ ಆರ್ ನಗರದಿಂದ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದ್ದಾರೆ.