ಪ್ರಧಾನ ಮಂತ್ರಿ ನರೇಂದ್ರ ಮೋದಿ ಹುಟ್ಟು ಹಬ್ಬವನ್ನು ಮಾಜಿ ಸಂಸದ ಪ್ರತಾಪ್ ಸಿಂಹ ಇಂದು ಮೈಸೂರಿನಲ್ಲಿ ಆಚರಣೆ ಮಾಡಿದ್ದಾರೆ. ನಿನ್ನೆ(ಸೆ. 17) ರಂದು ಪ್ರಧಾನಿ ನರೇಂದ್ರ ಮೋದಿಯವರ 75ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನೆಲೆ ಮೈಸೂರಿನ ಚಿಕ್ಕ ಗಡಿಯಾರ ಬಳಿ ಪ್ರತಾಪ್ ಸಿಂಹ ಇಂದು ಹುಟ್ಟುಹಬ್ಬ ಆಚರಣೆ ಮಾಡಿದ್ದಾರೆ.
ಪ್ರತಾಪ್ ಸಿಂಹ ಅಭಿಮಾನಿ ಬಳಗದಿಂದ ಕಾರ್ಯಕ್ರಮ ಆಯೋಜನೆ ಮಾಡಿಲಾಗಿತ್ತು.ಕಾರ್ಯಕ್ರಮದಲ್ಲಿ ರಸ್ತೆ ಬದಿ ವ್ಯಾಪಾರಸ್ಥ ಮಹಿಳೆಯರಿಗೆ ಸೀರೆ ಮತ್ತು ಸಾರ್ವಜನಿಕರಿಗೆ ಸಿಹಿ ವಿತರಣೆ ಮಾಡಿ ಸಂಭ್ರಮಿಸಲಾಯಿತು.
ಕಾರ್ಯಕ್ರಮದಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಮತ್ತಿತರರು ಭಾಗಿ.