ಮಡಿಕೇರಿ: ಸುಂಟಿಕೊಪ್ಪ 66/33/11ಕೆವಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೊಮ್ಮುವ ಎಫ್1 ನಾಕೂರು ಫೀಡರ್ನ ವಿದ್ಯುತ್ ಮಾರ್ಗದಲ್ಲಿ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಸೆ.19 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಕಾನ್ಬೈಲು, ಅಂದಗೋವೆ, ಕಲ್ಲೂರು, ಹೆರೂರು, ಮಳೂರು, ಹಾದ್ರೆಹೆರೂರು, ನಾಕೂರು ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸೆಸ್ಕ್ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ತಿಳಿಸಿದ್ದಾರೆ.
————————-
20 ರಂದು ಸ್ವಚ್ಛತಾ ಕಾರ್ಯ
ಭಾಗಮಂಡಲ: ಶ್ರೀ ತಲಕಾವೇರಿ ದೇವಾಲಯದಲ್ಲಿ ಸೆ.20 ರಂದು ಮಧ್ಯಾಹ್ನ 2 ಗಂಟೆಯ ನಂತರ ಸ್ವಚ್ಛತಾ ಕಾರ್ಯದ ಪ್ರಯುಕ್ತ ಶ್ರೀ ತಲಕಾವೇರಿ ದೇವಾಲಯದ ಪ್ರವೇಶ ಇರುವುದಿಲ್ಲ ಎಂದು ಭಗಂಡೇಶ್ವರ-ತಲಕಾವೇರಿ ಮತ್ತು ಸಮೂಹ ದೇವಾಲಯಗಳ ಕಾರ್ಯನಿರ್ವಾಹಕ ಅಧಿಕಾರಿ ಎನ್.ಜಿ.ಚಂದ್ರಶೇಖರ್ ತಿಳಿಸಿದ್ದಾರೆ.