ಸಚಿವ ಮುನಿರತ್ನ ಅವರ ಪ್ರಕರಣಗಳ ತನಿಖೆಗೆ ಪೊಲೀಸರ ವಿಶೇಷ ತನಿಖಾ ತಂಡ (ಎಸ್ ಐಟಿ) ರಚಿಸುವಂತೆ ಇಂದು ಸಿಎಂ ಸಿದ್ದರಾಮಯ್ಯ ಅವರಿಗೆ ಒಕ್ಕಲಿಗ ನಾಯಕರು ಮನವಿ ಸಲ್ಲಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಒಕ್ಕಲಿಗ ಸಮುದಾಯದ ಸಚಿವರು, ಶಾಸಕರ ನಿಯೋಗ ಮುನಿಸ್ವಾಮಿ ವಿರುದ್ದ ದಾಖಲಾಗಿರುವ ಪ್ರಕರಣಗಳ ತನಿಖೆಗೆ ಎಸ್ ಐ ಟಿ ತಂಡ ರಚಿಸುವಂತೆ ಮನವಿ ಮಾಡಿದ್ದಾರೆ.
ಬಿಬಿಎಂಪಿ ತ್ಯಾಜ್ಯ ವಿಲೇವಾರಿ ಗುತ್ತಿಗೆಯಲ್ಲಿ ಕಮಿಷನ್ ನೀಡುವಂತೆ ಗುತ್ತಿಗೆದಾರ ಚಲುವರಾಜ್ ಅವರಿಗೆ ಜೀವ ಬೆದರಿಕೆ ಹಾಕಿ ನಿಂದಿಸಿದ ಹಾಗೂ ಜಾತಿ ನಿಂದನೆ ಮಾಡಿದ ಆರೋಪದ ಮೇರೆಗೆ ವೈಯಾಲಿಕಾವಲ್ ಠಾಣೆಯಲ್ಲಿ ಮುನಿರತ್ನ ವಿರುದ್ಧ ಪ್ರತ್ಯೇಕ ಎಫ್ಐಆರ್ ದಾಖಲಾಗಿದ್ದವು. ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರು ಶಾಸಕ ಮುನಿರತ್ನ. ನಿನ್ನೆ(ಗುರುವಾರ)ಯಷ್ಟೇ ಜಾಮೀನಿನ ಹೊರಬಂದಿದ್ದ ಶಾಸಕರ ವಿರುದ್ಧ ಇದೀಗ ಮತ್ತೊಂದು ಪ್ರಕರಣ ದಾಖಲಾಗಿದ್ದು, ಅತ್ಯಾಚಾರ ಮತ್ತು ಹನಿಟ್ರ್ಯಾಪ್ ಆರೋಪದ ಮೇಲೆ ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆ ಪೊಲೀಸರು ಶಾಸಕ ಮುನಿಸ್ವಾಮಿ ಅವರನ್ನು ಮತ್ತೆ ಬಂಧಿಸಿದ್ದಾರೆ.