ಬಿಜೆಪಿಯವರ ಕುಮ್ಮಕ್ಕಿನಿಂದಲೇ ಹಲವೆಡೆ ಗಲಾಟೆ ನಡೆಯುತ್ತಿದೆ. ಬಿಜೆಪಿಯವರು ಕೋಮುವಾದಿಗಳು, ಅವರು ನೀಡುವ ಹೇಳಿಕೆಯಿಂದ ಗಲಾಟೆಗಳು ನಡೆಯುತ್ತಿವೆ ಎಂದು ಮೈಸೂರಿನಲ್ಲಿ ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.
ರಾಜ್ಯದಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ಹಲವೆಡೆ ಗಲಾಟೆ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಪ್ರತಿನಿತ್ಯ ಏನು ಗಲಾಟೆ ನಡೆಯುತ್ತಿಲ್ಲ.ಇದುವರೆಗೆ ಎರಡು ಪ್ರಕರಣ ನಡೆದಿವೆ.
ಘಟನೆಯ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದೇನೆ. ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ತಿಳಿಸಿದ್ದೇನೆ.ನಾಗಮಂಗಲ ಪ್ರಕರಣದಲ್ಲಿ ಡಿವೈಎಸ್ಪಿ, ಇನ್ಸ್ಪೆಕ್ಟರ್ ಅಮಾನತು ಮಾಡಿದ್ದೇವೆ. ಅಲ್ಲದೆ ಬಿಜೆಪಿಯವರ ಕುಮ್ಮಕ್ಕಿನಿಂದಲೇ ಹಲವೆಡೆ ಗಲಾಟೆ ನಡೆಯುತ್ತಿದೆ. ಬಿಜೆಪಿಯವರು ಕೋಮುವಾದಿಗಳು, ಅವರು ನೀಡುವ ಹೇಳಿಕೆಯಿಂದ ಗಲಾಟೆಗಳು ನಡೆಯುತ್ತಿವೆ ಎಂದು ಆರೋಪಿಸಿದ್ದಾರೆ.
ಇನ್ನು KPSC ಮರುಪರೀಕ್ಷೆ ನಡೆಸುವ ವಿಚಾರವಾಗಿ ಮಾತನಾಡಿ, ಒಂದು ಬಾರಿ ನಿರ್ಧಾರ ಮಾಡಿ ಎಂದು ಗೃಹ ಇಲಾಖೆಗೆ ಸೂಚನೆ ನೀಡಿದ್ದೇನೆ. ತಹಸೀಲ್ದಾರ್ ಹಾಗೂ ಉಪ ಆಯುಕ್ತರ ಪರೀಕ್ಷೆ ನಡೆಸುವುದಾಗಿ ಸೂಚನೆ ನೀಡಿದ್ದೇನೆ.ಕನ್ನಡದಲ್ಲಿ ಸಾಕಷ್ಟು ತಪ್ಪಾಗಿದೆ ಹೀಗಾಗಿ ಮರು ಪರೀಕ್ಷೆ ಮಾಡಲು ಸೂಚನೆ ನೀಡಿದ್ಧೇನೆ ಎಂದಿದ್ದಾರೆ.