ಪ್ರತಿನಿಧಿ ವರದಿ ಮಡಿಕೇರಿ
ಕೊಡಗು ಜಿಲ್ಲಾ ಮಹಾಬೋಧಿ ಪತ್ತಿನ ಸಹಕಾರ ಸಂಘದ ಮಹಾಸಭೆ ಸೆ.22ರಂದು ನಗರದ ಡಾ.ಅಂಬೇಡ್ಕರ್ ಭವನದಲ್ಲಿ ಸಂಘದ ಅಧ್ಯಕ್ಷ ಎಸ್.ಸಿ.ಸತೀಶ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಮುಖ್ಯ ಕಾರ್ಯನಿರ್ವಹಣಾಧಿಕಾರಿ ದೇವಕ್ಕಿ ತಿಳಿಸಿದ್ದಾರೆ. ಭಾನುವಾರ ಬೆಳಗ್ಗೆ 10.30 ಗಂಟೆಗೆ ನಡೆಯುವ ಮಹಾಸಭೆಯಲ್ಲಿ ನಿರ್ದೇಶಕರುಗಳು ಹಾಗೂ ಸರ್ವ ಸದಸ್ಯರು ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ.