ಬೆಂಗಳೂರು : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಇದೀಗ ಸಂಕಷ್ಟ ಎದುರಾಗಿದ್ದು ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದ ಆದೇಶ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯನ್ನ ಹೈಕೋರ್ಟ್ ವಜಾಗೊಳಿಸಿದೆ.ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾ. ನಾಗಪ್ರಸನ್ನ ಅವರಿದ್ದ ಪೀಠ ವಾದ ಪ್ರತಿವಾದ ಆಲಿಸಿ ತೀರ್ಪು ಕಾಯ್ದಿರಿಸಿತ್ತು. ಇದೀಗ ಇಂದು ನ್ಯಾ. ನಾಗಪ್ರಸನ್ನ ತೀರ್ಪು ಪ್ರಕಟಿಸಿದ್ದು ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ್ದಾರೆ. ಖಾಸಗಿ ದೂರುದಾರರೇ ಅನುಮತಿ ಕೋರಬಹುದು. 17ಎ ಅಡಿ ಅನುಮತಿ ಕೋರಿದ್ದುಸರಿಯಾಗಿದೆ. ಸಚಿವ ಸಂಫುಟದ ಶೀಫಾರಸ್ಸನ್ನು ರಾಜ್ಯಪಾಲರು ತಿರಸ್ಕರಿಸಿದ್ದು ಸರಿಯಾಗಿದೆ ಎಂದು ನ್ಯಾ. ನಾಗಪ್ರಸನ್ನ ಅವರಿದ್ದ ಪೀಠ ಅಭಿಪ್ರಾಯ ವ್ಯಕ್ತಪಡಿಸಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯಗೆ ಮತ್ತೆ ಸಂಕಷ್ಟ ಎದುರಾಗಿದೆ.
ಸಿದ್ದರಾಮಯ್ಯ ಪರ ವಕೀಲರಿಂದ ತಡೆಯಾಜ್ಞೆ ಕೊಡುವಂತೆ ಮನವಿ ಮಾಡಲಾಯ್ತು. ಈ ವೇಳೆ ಮನವಿ ಕೋರ್ಟ್ ತಿರಸ್ಕರಿಸಿದ ಕೋರ್ಟ್, ಮಧ್ಯಾಹ್ನ ಆದೇಶ ಪ್ರತಿ ನಿಮ್ಮ ಕೈಗೆ ಸಿಗುತ್ತೆ. ನನ್ನ ಆದೇಶಕ್ಕೆ ನಾನು ತಡೆಯಾಜ್ಞೆ ಕೊಡಲ್ಲ ಎಂದು ನ್ಯಾಯಾಧೀಶರು ತಿಳಿಸಿದರು. ಇದೇ ವೇಳೆ ಹೈಕೋರ್ಟ್ ಏಕಸದಸ್ಯ ಪೀಠ ಕೆಳ ನ್ಯಾಯಾಲಯದ ತಡೆ ತೆರವು ಮಾಡಿದೆ. ರಾಜ್ಯಪಾಲರು ತೆಗೆದುಕೊಂಡಿರುವ ನಿರ್ಧಾರದಲ್ಲಿ ಯಾವುದೇ ಲೋಪಗಳಿಲ್ಲ. ವಿವೇಚನಾಧಿಕಾರ ಸರಿ ಇದೆ. 17a ಅನುಮತಿ ತೆಗೆದುಕೊಳ್ಳುವುದು ಇಂತಹ ಕೇಸ್ನಲ್ಲಿ ಕಡ್ಡಾಯ ಹೀಗಾಗಿ ದೂರುದಾರರು ಅದನ್ನು ಪಾಲಿಸಿದ್ದಾರೆ ಎಂದು ಹೈಕೋರ್ಟ್ ತಿಳಿಸಿದೆ. ಕೋರ್ಟ್ ಅದೇಶದಿಂದ ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಕುರ್ಚಿ ಶೇಕ್ ಆಗಿದ್ದು, ಇದು ಯಾವ ರೀತಿ ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಲಿದೆ ಅನೋದನ್ನ ಕಾದುನೋಡಬೇಕಿದೆ.ಮುಡಾ ನಿವೇಶನ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಆರ್ಟಿಐ ಕಾರ್ಯಕರ್ತ ಟಿ.ಜೆ. ಅಬ್ರಾಹಂ, ರಾಜ್ಯಪಾಲರಿಗೆ ದೂರು ನೀಡಿದ್ದರು. ಇದೇ ದೂರು ಸಿಎಂ ಸಿದ್ದರಾಮಯ್ಯನವರಿಗೆ ಸಂಕಷ್ಟ ತಂದಿತ್ತು. ಟಿ.ಜೆ. ಅಬ್ರಾಹಂ ನೀಡಿದ ದೂರಿನ ಮೇರೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನಿಮ್ಮ ವಿರುದ್ಧ ಯಾಕೆ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಬಾರದು ಎಂದು ಸಿದ್ದರಾಮಯ್ಯಗೆ ಶೋಕಾಸ್ ನೋಟಿಸ್ ನೀಡಿದ್ದರು. ಸಿದ್ದರಾಮಯ್ಯಗೆ ನೀಡಿರುವ ನೋಟಿಸ್ ವಾಪಸ್ ಪಡೆಯಬೇಕೆಂದು ಸಚಿವ ಸಂಪುಟ ನಿರ್ಣಯ ಅಂಗೀಕರಿಸಿತ್ತು. ಆದರೆ ರಾಜ್ಯಪಾಲರು ಸಚಿವ ಸಂಪುಟದ ನಿರ್ಣಯ ಧಿಕ್ಕರಿಸಿ ಸಿಎಂ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದರು.
Leave a comment