ಪ್ರತಿನಿಧಿ ವರದಿ ಚಾಮರಾಜನಗರ
ತಾಲೂಕಿನ 12 ಬಿಸಲವಾಡಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶೌಚಾಲಯ ನಿರ್ಮಾಣಕ್ಕೆ ಗ್ರಾಪಂ ಅಧ್ಯಕ್ಷ ಸಿ.ಬಾಲರಾಜು ಭೂಮಿಪೂಜೆ ನೆರವೇರಿಸಿದರು.
ಶಾಲೆಯಲ್ಲಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಡಿಯಲ್ಲಿ 3.30 ಲಕ್ಷ ರೂ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ 2 ಲಕ್ಷ ರೂ. ಒಟ್ಟಾರೆ 5.30 ಲಕ್ಷ ರೂ. ವೆಚ್ಚದಲ್ಲಿ ಶಾಲೆಯಲ್ಲಿ ಸುಸಜ್ಜಿತ ಶೌಚಾಲಯ ನಿರ್ಮಾಣ ವಾಗಲಿದೆ ಎಂದರು.
ಇದೇ ಸಂದರ್ಭದಲ್ಲಿ ಓಡಿಪಿ ಸಹಯೋಗದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ರಾಜ್ಯ ಸರ್ಕಾರದಿಂದ 2 ದಿನ ಹಾಗೂ ಅಜೀಂಪ್ರೇಮ್ ಜಿ ಫೌಂಡೇಶನ್ ವತಿಯಿಂದ 4 ದಿನ ಸೇರಿದಂತೆ ಒಟ್ಟಾರೆ ವಾರದಲ್ಲಿ 6ದಿನಗಳ ಕಾಲ ಮೊಟ್ಟೆ ವಿತರಣೆ ಮಾಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಉಪಾಧ್ಯಕ್ಷೆ ಬೇಬಿ, ಪಿಡಿಒ ರಾಜೇಂದ್ರಪ್ರಸಾದ್, ಸದಸ್ಯ ಮಹದೇವಪ್ಪ, ಕುಮಾರ್, ಅಲೋಕ್, ಸಿದ್ದರಾಜು, ಗೀತಾ, ಮುಖ್ಯ ಶಿಕ್ಷಕರು, ಓಡಿಪಿ ಸಂಸ್ಥೆಯ ಸಿಬ್ಬಂದಿ ಇದ್ದರು.
25ಸಿಎಚ್ಎನ್.3: ಚಾಮರಾಜನಗರ ತಾಲೂಕಿನ ಬಿಸಲವಾಡಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಾರದಲ್ಲಿ 6 ದಿನಗಳ ಕಾಲ ಮೊಟ್ಟೆ ವಿತರಣೆ ಮಾಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
P