ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ದ ನಿನ್ನೆ(ಸೆ.27) ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯನವರ ಮೈಸೂರು ನಿವಾಸಕ್ಕೆ ಸಚಿವ ಡಾ ಹೆಚ್ ಸಿ ಮಹದೇವಪ್ಪ, ನಗರಾಭಿವೃದ್ದಿ ಸಚಿವ ಭೈರತಿ ಸುರೇಶ್ ಹಾಗೂ ಸಿಎಂ ಕಾನೂನು ಸಲಹೆಗಾರ ಪೊನ್ನಣ ದೌಡಾಯಿಸಿದ್ದಾರೆ. ಅಲ್ಲದೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಕೂಡ ಸಿದ್ದರಾಮಯ್ಯ ನಿವಾಸಕ್ಕೆ ಆಗಮಿಸಿದ್ದಾರೆ.
ಮುಂದಿನ ಹಂತದ ಕಾನೂನು ಹೋರಾಟದ ಬಗ್ಗೆ ಸಿಎಂ ಸಿದ್ದರಾಮಯ್ಯ ಜೊತೆ ಗಂಭೀರ ಚರ್ಚೆ ನಡೆಯುವ ಸಾಧ್ಯತೆ ಇದ್ದು, ಭೈರತಿ ಸುರೇಶ್, ಪೊನ್ನಣ್ಣ ಭೇಟಿ ಇದೀಗ ತೀವ್ರ ಕುತೂಹಲ ಮೂಡಿಸಿದೆ.