ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರು ನಗರ ಜಿಲ್ಲೆಯ ಯಲಹಂಕ ತಾಲೂಕಿನ ಸಿಂಗನಾಯಕನಹಳ್ಳಿ ಗ್ರಾಮದ ಯಡಿಯೂರಪ್ಪ ನಗರದಲ್ಲಿ ವಾಸವಿದ್ದ ಕುಟುಂಬ ಆತ್ಮಹತ್ಯೆ ಮಾಡಿಕೊಂಡಿದೆ.
ದಂಪತಿ ಮತ್ತು ಇಬ್ಬರು ಮಕ್ಕಳು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವಿನಾಶ್ (33) ಪತಿ, ಮಮತಾ (30) ಪತ್ನಿ, ಅಧಿರಾ (05) ಮಗಳು, ಅಣ್ಣಯ್ಯ (03) ಮಗ ಮೃತ ದುರ್ದೈವಿಗಳು. ಸ್ಥಳಕ್ಕೆ ರಾಜಾನುಕುಂಟೆ ಠಾಣೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರ ಸಂಬಂಧಿಕರು ದೌಡಾಯಿಸಿದ್ದು ಹೆಚ್ಚಿನ ಮಾಹಿತಿಯನ್ನ ಪೊಲೀಸರು ಕಲೆ ಹಾಕುತ್ತಿದ್ದಾರೆ.