ಜಮ್ಮು&ಕಾಶ್ಮೀರಾ: ಜಮ್ಮು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಇಂದು ಓಮರ್ ಅಬ್ದುಲ್ಲಾ ಪ್ರಮಾಣವಚನ ಸ್ವೀಕರಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಮನೋಜ್ ಸಿನ್ಹಾ ಅವರು ಒಮರ್ ಅಬ್ದುಲ್ಲಾ ಮತ್ತು ಅವರ ಸಚಿವರಿಗೆ ಪ್ರಮಾಣವಚನ ಬೋಧಿಸಿದ್ದು, ಆರ್ಟಿಕಲ್ 370 ರದ್ದಾದ ನಂತರ ಮೊದಲ ಬಾರಿಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಜಯಗಳಿಸಿದ ನಂತರ ಓಮರ್ ಅಬ್ದುಲ್ಲಾ ಅವರು ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿಯಾಗಿ ಪ್ರಮಾಣವಚನವನ್ನು ಇಂದು ಸ್ವೀಕರಿಸಿದ್ದಾರೆ. 90 ಸ್ಥಾನಗಳ ಪೈಕಿ ನ್ಯಾಷನಲ್ ಕಾನ್ಫರೆನ್ಸ್ 42 ಮತ್ತು ಕಾಂಗ್ರೆಸ್ 6 ವಿಧಾನಸಭಾ ಸ್ಥಾನಗಳನ್ನು ಗೆದ್ದಿವೆ. ಅದೇ ಸಮಯದಲ್ಲಿ ಬಿಜೆಪಿ 29 ವಿಧಾನಸಭಾ ಸ್ಥಾನಗಳನ್ನು ಗೆಲುವು ದಾಖಲಿಸುವುದರಲ್ಲಿ ಯಶಸ್ವಿಯಾಗಿದೆ. 54 ವರ್ಷ ವಯಸ್ಸಿನ ಓಮರ್ ಅಬ್ದುಲ್ಲಾ 2009 ರಿಂದ 2015ರವರೆಗೆ ಮುಖ್ಯಮಂತ್ರಿಯಾಗಿ ಜಮ್ಮು ಕಾಶ್ಮೀರದಲ್ಲಿ ಸೇವೆ ಸಲ್ಲಿಸಿದ್ದಾರೆ.
ಸಂಪುಟ ಸಚಿವರಾಗಿ ಸುರೇಂದ್ರ ಚೌಧರಿ, ಸಕೀನಾ, ಜಾವೇದ್ ಅಹ್ಮದ್ ರಾಣಾ, ಜಾವೇದ್ ದಾರ್, ಸತೀಶ್ ಶರ್ಮಾ ಪ್ರಮಾಣವಚನ ಸ್ವೀಕರಿಸಿದ್ದಾರೆ. ಕಾರ್ಯಕ್ರಮದಲ್ಲಿ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸೇರಿ ಹಲವರು ಉಪಸ್ಥಿತರಿದ್ದರು.