ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಬಿಎಂಡಬ್ಲ್ಯೂ ಕಾರೊಂದು ಬೆಂಕಿಗೆ ಆಹುತಿಯಾಗಿರುವ ಘಟನೆ ಸುರತ್ಕಲ್ ಎನ್ ಐಟಿಕೆ ಹಳೆ ಟೋಲ್ ಗೇಟ್ ಬಳಿ ಸೆ.5ರ ಗುರುವಾರ ಬೆಳಗ್ಗೆ ವರದಿಯಾಗಿದೆ.
ಸುಟ್ಟು ಕರಕಲಾದ ಕಾರು ಉಡುಪಿ ಕಡೆಯಿಂದ ರಾಷ್ಟ್ರೀಯ ಹೆದ್ದಾರಿಯಾಗಿ ಮಂಗಳೂರು ಕಡೆಗೆ ತೆರಳುತ್ತಿತ್ತು ಎನ್ನಲಾಗಿದೆ. ಎನ್ ಐಟಿಕೆ ಬಳಿ ಏಕಾಏಕಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಭಸ್ಮವಾಗಿದೆ ಎಂದು ತಿಳಿದು ಬಂದಿದೆ. ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಕಾರು ಹೊತ್ತಿ ಉರಿಯುತ್ತಿದ್ದ ವೇಳೆ ಹೆದ್ದಾರಿಯಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.