ಚಿಕ್ಕಮಗಳೂರು: ಕಡೂರು ತಾಲೂಕಿನ ಸರಸ್ವತಿಪುರ ಗೇಟ್ ಬಳಿ ಚಿಕ್ಕಮಗಳೂರಿಂದ ಹುಬ್ಬಳ್ಳಿಗೆ ಹೋಗುತ್ತಿದ್ದ ಕಾರು ಶಾರ್ಟ್ ಸರ್ಕ್ಯೂಟ್ ನಿಂದ ರಸ್ತೆ ಮಧ್ಯೆದಲ್ಲೆ ಸುಟ್ಟು ಭಸ್ಮವಾಗಿದೆ.
ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ನಾಲ್ವರು ಪ್ರಯಾಣಿಕರು ಕೆಳಗಿಳಿದು ಪ್ರಾಣಪಾಯದಿಂದ ಪಾರಾಗಿದ್ದಾರೆ. ಕಡೂರು ಅಗ್ನಿ ಶಾಮಕ ಠಾಣೆ ಸಿಬ್ಬಂದಿ ಬೆಂಕಿ ನಂದಿಸಿದ್ದರು.