ಮಂಡ್ಯ: ಕೆಎಸ್ಆರ್ಟಿಸಿ ಬಸ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ನಾಲ್ವರು ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರು ಕ್ರಾಸ್ ಬಳಿ ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ನಡೆದಿದೆ.
ಮಾರುತಿ ಶಿಫ್ಟ್ ಕಾರು ಹಾಸನ ಕಡೆಯಿಂದ ಬರುತ್ತಿತ್ತು, ಈ ವೇಳೆ ಮುಂದೆ ಹೋಗುತ್ತಿದ್ದ ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಡಿಕ್ಕಿ ರಭಸದಿಂದ ಕಾರು ಸಂಪೂರ್ಣವಾಗಿ ನಜ್ಜು-ಗುಜ್ಜಾಗಿದೆ.
ಕಾರಿನಲ್ಲಿ ಇದ್ದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೂರು ಮಂದಿ ಮಹಿಳೆಯರು ಹಾಗೂ ಓರ್ವ ಪುರುಷ ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿರುವವರ ಗುರುತು ಇನ್ನೂ ಪತ್ತೆಯಾಗಿಲ್ಲ. ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಬೆಳ್ಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.