ಪ್ರತಿನಿಧಿ ವರದಿ ಹಾಸನ
ನಗರದ ಕೆ.ಆರ್.ಪುರಂನಲ್ಲಿ ಮಂಗಳವಾರ ರಾತ್ರಿ ಅಪ್ರಾಪ್ತ ಬಾಲಕರು ಕಾರಿನಲ್ಲಿ ಜಾಲಿರೈಡ್ ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿ ನಿಂತಿದ್ದ ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದರೆ.
ವೇಗವಾಗಿ ಚಲಾಯಿಸುತ್ತಿದ್ದ ಕಾರಣ ಬಾಲಕನ ನಿಯಂತ್ರಣಕ್ಕೆ ಸಿಗದ ಕಾರು, ಹೈಸ್ಕೂಲ್ ಫೀಲ್ಡ್ ರಸ್ತೆ ದಾಟಿ ಹೋಟೆಲ್ ಪೋರ್ಟಿಕೊದಲ್ಲಿ ನಿಲ್ಲಿಸಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ.
ಅಪ್ರಾಪ್ತ ಚಲಾಯಿಸುತ್ತಿದ್ದ ಕಾರಿನ ಮುಂಭಾಗ ಮತ್ತು ನಿಂತಿದ್ದ ಕಾರಿನ ಹಿಂಭಾಗ ಸೇರಿ ಎರಡೂ ಕಾರುಗಳು ಜಖಂಗೊಂಡಿವೆ. ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಬಾರಿ ಅನಾಹುತವೊಂದು ತಪ್ಪಿದಂತಾಗಿದೆ. ಸ್ಥಳಕ್ಕೆ ಹಾಸನ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಾರನ್ನು ವಶಪಡಿಸಿಕೊಂಡು ಬಾಲಕನ ಪೋಷಕರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.