ಮೈಸೂರಿನ ಉದಯಗಿರಿ ಮೆಡಿಕಲ್ ಸ್ಟೋರ್ಗೆ ಔಷಧಿ ಖರೀದಿಸಲು ಬಂದಿದ್ದ ವ್ಯಕ್ತಿಗೆ ಹೃದಯಾಘಾತವಾಗಿದ್ದು ಕುಸಿದು ಬಿದ್ದು ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜಗದೀಶ್(38) ಮೃತ ವ್ಯಕ್ತಿ. ಜಗದೀಶ್ ಕುಸಿದು ಬಿದ್ದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ ಮಾತ್ರೆ ಖರೀದಿಸಲು ಜಗದೀಶ್ ಮೆಡಿಕಲ್ ಸ್ಟೋರ್ಗೆ ಬಂದಿದ್ದರು. ಈ ವೇಳೆ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಮೃತ ಜಗದೀಶ್ ಅವರು ಕ್ಯಾತಮಾರನಹಳ್ಳಿಯಲ್ಲಿ ಚಿಕನ್ ಅಂಗಡಿ ನಡೆಸುತ್ತಿದ್ದರು. ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.