ಮೈಸೂರು : ಭ್ರೂಣ ಪತ್ತೆ ಮತ್ತು ಹತ್ಯೆ ಬಗ್ಗೆ ಮಾಹಿತಿ ನೀಡಿದರೆ 50 ಸಾವಿರ ರೂ. ಬಹುಮಾನವಾಗಿ ನೀಡಲಾಗುವುದು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ.
ಮೈಸೂರಿನಲ್ಲಿ ಭ್ರೂಣ ಹತ್ಯೆ ಪ್ರಕರಣ ಸಂಬಂಧ ಮೈಸೂರಿನ ಮಾತಾ ಆಸ್ಪತ್ರೆಯಲ್ಲೇ ಆಪರೇಷನ್ ನಡೆಯುತಿತ್ತು ಎಂಬ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಮೈಸೂರಿನ ತಾಲೂಕು ಆರೋಗ್ಯಧಿಕಾರಿ ಡಾ. ರಾಜೇಶ್ವರಿ ಮತ್ತು ಈ ಹಿಂದೆ ಕರ್ತವ್ಯ ನಿರ್ವಹಿಸುತ್ತಿದ್ದ ಜಿಲ್ಲಾ ಕುಟುಂಬ ಕಲ್ಯಾಣಧಿಕಾರಿ ಡಾ. ರವಿ ಅವರನ್ನು ಅಮಾನತು ಮಾಡಲಾಗಿತ್ತು.
ಈಗ ಈ ಪ್ರಕರಣ ಹೆಚ್ಚು ತೀವ್ರತೆ ಪಡೆಯುತ್ತಿದ್ದು, ಮೈಸೂರು ನಗರ ಮತ್ತು ಜಿಲ್ಲೆಯ 139 ಸ್ಕ್ಯಾನಿಂಗ್ ಸೆಂಟರ್ ಮೇಲೆ ತೀವ್ರ ನಿಗಾ ಇಡಲಾಗುತ್ತಿದೆ. ಟಾಸ್ಕ್ ಪೋರ್ಸ್ ನಿಂದ ಎಲ್ಲಾ ಕಡೆ ನಿಗಾ ಇಡಲಾಗಿದೆ. ಭ್ರೂಣ ಪತ್ತೆ, ಹತ್ಯೆ ಬಗ್ಗೆ ಮಾಹಿತಿ ನೀಡಿದರೆ 50 ಸಾವಿರ ನಗದು ಬಹುಮಾನವಾಗಿ ನೀಡಲಾಗುವುದು. ಮಾಹಿತಿ ನೀಡಿದವರ ಬಗ್ಗೆ ಗೌಪ್ಯತೆ ಕಾಪಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.