ಮೈಸೂರು:
ಸಾರಿಗೆ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟಿರುವ ಘಟನೆ ಮೈಸೂರು-ನಂಜನಗೂಡು ರಸ್ತೆಯ ಗುಂಡೂರಾವ್ ನಗರದ ಬಳಿ ನಡೆದಿದೆ. ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದ ನಿವಾಸಿ ಸೈಯದ್ ಎಸ್ ನ್ಯೂಮಾನ್(26)ಮೃತ ದುರ್ದೈವಿ. ಖಾಸಗಿ ಕಂಪನಿಯಲ್ಲಿ ಮೆಡಿಕಲ್ ರೆಪ್ರೆಸೆಂಟಿಟೀವ್ ಆಗಿ ಕೆಲಸ ನಿರ್ವಹಿಸುತ್ತಿದ್ದ ನ್ಯೂಮಾನ್, ಕೆಲಸದ ನಿಮಿತ್ತ ಬೈಕ್ನಲ್ಲಿ ಬರುತ್ತಿದ್ದ ವೇಳೆ ಹಿಂದಿನಿಂದ ವೇಗವಾಗಿ ಬಂದ ಸಾರಿಗೆ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಯುವಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತನ ಪೋಷಕರು ನೀಡಿದ ದೂರಿನ ಮೇರೆಗೆ ಕೆ.ಆರ್. ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Leave a comment