ಮಡಿಕೇರಿ: ಕರ್ನಾಟಕ ಲೋಕಾಯುಕ್ತ, ಕೊಡಗು ಜಿಲ್ಲೆ, ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಜೂ.12 ರಂದು ಸೋಮವಾರಪೇಟೆ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಮತ್ತು ಜೂ.14 ರಂದು ಮಡಿಕೇರಿ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಆಯಾಯ ದಿನಗಳಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಕರ್ನಾಟಕ ಲೋಕಾಯುಕ್ತ ಕಾಯ್ದೆಯಡಿ ಅರ್ಜಿ ಸ್ವೀಕರಿಸಲಾಗುತ್ತದೆ. ನೋಟರಿಯಿಂದ ಆಫಿಡೆವಿಟ್ ಮಾಡಿಸಿ ನೀಡಬೇಕಿದೆ.
ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದು.
ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ ಮಡಿಕೇರಿ ದೂ.ಸಂ.08272-295297ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರ ಪ್ರಕಟಣೆ ತಿಳಸಿದೆ.