ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಮತ್ತು ಗ್ಯಾಂಗ್ಗೆ ಆ.28ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆಯಾಗಿದೆ. ಆರೋಪಿಗಳಿಗೆ ನ್ಯಾಯಾಂಗ ಬಂಧನ ಮುಂದುವರಿಸುವಂತೆ ಪೊಲೀಸರು ರಿಮ್ಯಾಂಡ್ ಅರ್ಜಿ ಸಲ್ಲಿಸಿದ್ದರು. ಹೀಗಾಗಿ ಆರೋಪಿಗಳಿಗೆ 24ನೇ ಎಸಿಎಂಎಂ ನ್ಯಾಯಾಲಯದ ಇನ್ಚಾರ್ಜ್ ಕೋರ್ಟ್, ನ್ಯಾಯಾಂಗ ಬಂಧನವನ್ನು ವಿಸ್ತರಿಸಿದೆ.ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರದಿಂದ 13 ಹಾಗೂ ತುಮಕೂರು ಜೈಲಿನಿಂದ 4 ಆರೋಪಿಗಳನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶ ವಿಶ್ವನಾಥ್ ಸಿ ಗೌಡರ್ ಮುಂದೆ ಹಾಜರು ಪಡಿಸಲಾಗಿತ್ತು. ಆದರೆ, ಆಗಸ್ಟ್ 28ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿರುವುದರಿಂದ ದರ್ಶನ್ ಗ್ಯಾಂಗ್ಗೆ ಸೆರೆವಾಸ ಮುಂದುವರಿದಿದೆ.ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾರ್ಜ್ ಶೀಟ್ ಸಿದ್ಧಪಡಿಸುವ ಪ್ರಕ್ರಿಯೆಯನ್ನು ಪೊಲೀಸರು ಶುರು ಮಾಡಿದ್ದಾರೆ. ಎಲ್ಲ ರಿಪೋರ್ಟ್ಗಳು ಬಂದ ಕಾರಣ ತನಿಖಾಧಿಕಾರಿ ಎಸಿಪಿ ಚಂದನ್ ನೇತೃತ್ವದಲ್ಲಿ ಸಿದ್ಧವಾಗಲಿರುವ ಚಾರ್ಜ್ ಶೀಟ್ 3-4 ಸಾವಿರಕ್ಕೂ ಅಧಿಕ ಪುಟಗಳ ಚಾರ್ಜ್ ಶೀಟ್ ಸಿದ್ಧವಾಗುವ ಸಾಧ್ಯತೆ ಇದೆ.