ಗದಗ, ಜ.09: ರಾಕಿಂಗ್ ಸ್ಟಾರ್ ಯಶ್ ಅವರ 38ನೇ ಹುಟ್ಟಹಬ್ಬದ ಹಿನ್ನೆಲೆ ಬರ್ತ್ಡೇ ಶುಭಾಶಯ ಕೋರಿ ಬ್ಯಾನರ್ ಹಾಕುವಾಗ ಮೂವರು ಅಭಿಮಾನಿಗಳು ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದರು. ಹಾಗೂ ಮೂವರು ಅಭಿಮಾನಿಗಳು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದರು. ಇನ್ನು ಆಸ್ಪತ್ರೆಗೆ ಭೇಟಿ ನೀಡಿ ಯಶ್ ವಾಪಸ್ ತೆರಳುತ್ತಿದ್ದಾಗ ಮತ್ತೊಂದು ಅವಘಡ ಸಂಭವಿಸಿತ್ತು. ಯಶ್ಗೆ ಭದ್ರತೆ ನೀಡುತ್ತಿದ್ದ ಪೊಲೀಸರ ವಾಹನಕ್ಕೆ ದ್ವಿಚಕ್ರ ವಾಹನ ಮುಳುಗುಂದ ರಸ್ತೆಯಲ್ಲಿ ಡಿಕ್ಕಿಯಾಗಿ ಯುವಕ ನಿಖಿಲ್ ಎಂಬಾತನ ತಲೆಗೆ ತೀವ್ರ ಪೆಟ್ಟಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಬೆಳಗ್ಗೆ ನಿಖಿಲ್ ಮೃತಪಟ್ಟಿದ್ದಾರೆ. ಮೃತ ನಿಖಿಲ್ ಗದಗ ತಾಲೂಕಿನ ಬಿಂಕದಕಟ್ಟಿ ಗ್ರಾಮದ ನಿವಾಸಿಯಾಗಿದ್ದರು.
ಗದಗ ಮುಳುಗುಂದ ರಸ್ತೆಯಲ್ಲಿ ಯಶ್ ಬೆಂಗಾವಲು ವಾಹನಕ್ಕೆ ನಿಖಿಲ್ ಸ್ಕೂಟಿ ಡಿಕ್ಕಿ ಹೊಡೆದಿತ್ತು. ಗಂಭೀರವಾಗಿ ಗಾಯಗೊಂಡ ನಿಖಿಲ್ನನ್ನು ಪೊಲೀಸ್ ವಾಹನದಲ್ಲೇ ಕರೆದೊಯ್ದು ಗದಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ನಿಖಿಲ್ ಮೃತಪಟ್ಟಿದ್ದಾರೆ. ಹುಟ್ಟಹಬ್ಬದ ದಿನವೇ ಅಭಿಮಾನಿಗಳ ಸಾವು ಯಶ್ಗೆ ಅಘಾತ ತಂದಿದೆ.