ಚಿಕ್ಕಮಗಳೂರು: ತಾಲೂಕಿನ ರೈತ ಸಂಪರ್ಕ ಕೇಂದ್ರಗಳಿಂದ ಕೃಷಿ ಉಪಕರಣಗಳಾದ ಜಿಪ್ಸಂ, ಲಘು ಪೋಷಕಾಂಶಗಳು, ಸಸ್ಯ ಸಂರಕ್ಷಣ ಔಷಧ, ಟಾರ್ಪಾಲಿನ್, ಮಾನವ ಚಾಲಿತ ಸೈಕಲ್ ವೀಡರ್, ಸೈಕಲ್ ಕೂರಿಗೆ ಹಾಗೂ ಕೃಷಿ ಯಾಂತ್ರೀಕರಣ ಮತ್ತು ಸೂಕ್ಷ್ಮ ನೀರಾವರಿ ಯೋಜನೆಯಡಿ ಸರ್ಕಾರದ ಸಹಾಯಧನದಲ್ಲಿ ಅನುಮೋದಿತ ಸಂಸ್ಥೆಗಳಿಗೆ ಹಣ ಪಾವತಿಸಿದ ರೈತರಿಗೆ ಜೇಷ್ಠತೆಯ ಆಧಾರದ ಮೇಲೆ ಅಗತ್ಯ ಯಂತ್ರೋಪಕರಣಗಳನ್ನು ನೀಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಸದುಪಯೋಗ ಪಡೆಯಬೇಕು ಎಂದು ಸಹಾಯಕ ಕೃಷಿ ನಿರ್ದೇಶಕಿ ಸಿ.ಸುಜಾತಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
ಚಿಕ್ಕಮಗಳೂರು: ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ 2024-25ನೇ ಸಾಲಿನಲ್ಲಿ ವಿವಿಧ ಯೋಜನೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಸೇವಾ ಸಿಂಧೂ ಪೋರ್ಟಲ್ https://sevasindhu.karnataka.gov.in, ಗ್ರಾಮಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆ.30 ರೊಳಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಅಥವಾ ನಿಗಮದ ವೆಬ್ಸೆಟ್ http://www.dbcdc.karnataka.gov.inನ್ನು ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ಚಿಕ್ಕಮಗಳೂರು: ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ 2024-25ನೇ ಸಾಲಿನಲ್ಲಿ ವಿವಿಧ ಯೋಜನೆಗಳಿಗೆ ಆನ್ ಲೈನ್ ಮೂಲಕ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಸೇವಾ ಸಿಂಧೂ ಪೋರ್ಟಲ್ ಮುಖಾಂತರ, ಗ್ರಾಮಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆ.31ರೊಳಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಹಿಂದುಳಿದ ವರ್ಗಗಳ ಜನರು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಯನ್ನು (ದೂ.ಸಂ. 08262-295815) ಅಥವಾ ನಿಗಮದ ವೆಬ್ಸೆಟ್ http://ambigaradevelopment.karnataka.gov.inನ್ನು ಸಂಪರ್ಕಿಸಬಹುದಾಗಿದೆ ಎಂದು ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.