ಮೈಸೂರು: ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಅಮಿತ್ ಶಾ ಭಾಗಿಯಾಗಿ ಗದ್ದುಗೆಗೆ ಪೂಜೆ ಸಲ್ಲಿಸಿದ್ದಾರೆ. ಬಳಿಕ ಶ್ರೀಮತಿ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಅಥಿತಿ ಗೃಹ ಉದ್ಘಾಟನೆ ಮಾಡಿದರು. ಅಲ್ಲದೆ ಅಯೋಧ್ಯೆ ರಾಮಲಲ್ಲಾ ಮೂರ್ತಿ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್ ಗೆ ಶ್ರೀ ಶಿವರಾತ್ರಿ ಶಿವಯೋಗಿಗಳ ಮೂರ್ತಿ ನೀಡಿ ಸನ್ಮಾನಿಸಿದರು. ಈ ವೇಳೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಬಿ.ವೈ. ವಿಜಯೇಂದ್ರ, ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ವಿಪಕ್ಷ ನಾಯಕ ಆರ್.ಅಶೋಕ ಸಾಥ್ ನೀಡಿದರು.