ರಾಯಚೂರು: ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ-ತಿದ್ದುಪಡಿ ಮತ್ತು ಅಭಿವೃದ್ಧಿ (ತಿದ್ದುಪಡಿ) ವಿಧೇಯಕ-2023 ಕುರಿತು ಸಾಧಕ-ಬಾಧಕಗಳನ್ನು ಅರಿಯಲು ವಿಧಾನ ಪರಿಷತ್ ಪರಿಶೀಲನಾ ಸಮಿತಿಯನ್ನು ರೂಪಿಸಿದ್ದು, ಸಮಿತಿ ಸದಸ್ಯರು ಎಲ್ಲೆಡೆ ಸಂಚರಿಸಿ ರೈತರ, ವರ್ತಕರ ಹಾಗೂ ಜನಸಾಮಾನ್ಯರೊಂದಿಗೆ ಸಮಾಲೋಚನೆ ನಡೆಸಿ ಅಭಿಪ್ರಾಯಗಳನ್ನು ಸಂಗ್ರಹಿಸುತ್ತಿದ್ದು, ಎಪಿಎಂಸಿ ಕಾಯ್ದೆಗೆ ಸಂಬಂಧಿಸಿದಂತೆ ಶೀಘ್ರ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಕೃಷಿ ಮಾರುಕಟ್ಟೆ ಹಾಗೂ ವಿಧಾನ ಪರಿಷತ್ತಿನ ಪರಿಶೀಲನಾ ಸಮಿತಿ ಅಧ್ಯಕ್ಷ ಶಿವಾನಂದ ಪಾಟೀಲ್ ತಿಳಿಸಿದರು.