ಪ್ರತಿನಿಧಿ ವರದಿ ಮಡಿಕೇರಿ
ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಪ್ರಥಮ ವರ್ಷಕ್ಕೆ 44 ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಹಾಗೂ ಲ್ಯಾಟರಲ್ ಎಂಟ್ರಿ ಮುಖಾಂತರ 2ನೇ ವರ್ಷದ ಡಿಪ್ಲೋಮಾ ಕೋರ್ಸ್ ಕಲಿಕೆಗಾಗಿ 44 ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ವ್ಯಾಸಂಗದ ಸಮಯದಲ್ಲಿ ಮಾರ್ಗಸೂಚಿಯ ಪ್ರಕಾರ ಪ್ರತಿ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ. 2500 ರವರೆಗೆ ಶಿಷ್ಯವೇತನ ನೀಡಲಾಗುವುದು ಹಾಗೂ ವಸತಿ ನಿಲಯದ ಸೌಲಭ್ಯವನ್ನು ಹಣ ಪಾವತಿಸುವ ಆಧಾರದ ಮೇಲೆ ಕಲ್ಪಿಸಲಾಗುವುದು.
ಎಸ್ಸೆಸ್ಸೆಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲೀಷನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 2024 ರ ಜು.01 ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳು 15 ರಿಂದ 23 ವರ್ಷಗಳ ವಯೋಮಿತಿಯಲ್ಲಿರಬೇಕು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು 15 ರಿಂದ 25 ವರ್ಷಗಳ ವಯೋಮಿತಿಯಲ್ಲಿರಬೇಕು. ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಕ್ರೋಢಿಕೃತ ಅಂಕಗಳು ಮೆರಿಟ್ ಲೆಕ್ಕಾಚಾರಕ್ಕೆ ಆಧಾರವಾಗಿರುತ್ತದೆ.
ಆಸಕ್ತ ಅಭ್ಯರ್ಥಿಗಳು ಜಾಲತಾಣ hಣಣಠಿs://ಞhಣigಚಿಜಚಿg.ಚಿಛಿ.iಟಿ/ಚಿಜmiಟಿsioಟಿಈoಡಿm.ಠಿಜಜಿ ಮೂಲಕ ಅರ್ಜಿಯನ್ನು ಡೌನ್ಲೋಡ್ ಮಾಡಿ ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಮೇ 31 ರ ಒಳಗಾಗಿ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪೂರ, ಗದಗ-ಬೆಟಗೇರಿ-582102 ಇವರಿಗೆ ಸಲ್ಲಿಸಬೇಕು ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.