ಮಡಿಕೇರಿ: ಅಸಾಧಾರಣ ಸಾಧನೆ ಮಾಡಿ ಪ್ರತಿಭೆ ತೋರಿರುವ 5 ರಿಂದ 18 ವರ್ಷದೊಳಗಿನ (ಜುಲೈ 31 ಕ್ಕೆ) ಮಕ್ಕಳನ್ನು ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಪ್ರಶಸ್ತಿಗಾಗಿ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ನಾವೀನ್ಯತೆ ಕ್ಷೇತ್ರ, ತಾರ್ಕಿಕ ಸಾಧನೆಗಳು, ಕ್ರೀಡೆ, ಕಲೆ, ಸಾಂಸ್ಕೃತಿಕ ಮತ್ತು ಸಂಗೀತ, ಈ 4 ವಿಭಾಗದಲ್ಲಿ ತಲಾ 2 ರಂತೆ ಒಟ್ಟು 8 ಪ್ರಶಸ್ತಿಗಳನ್ನು ನೀಡಲಾಗುತ್ತದೆ. ಈ ಜಿಲ್ಲಾ ಮಟ್ಟದ ಪ್ರಶಸ್ತಿಯು ಪ್ರಶಸ್ತಿ ಪತ್ರ ಹಾಗೂ ರೂ.10 ಸಾವಿರ ನಗದು ಬಹುಮಾನವನ್ನು ಒಳಗೊಂಡಿರುತ್ತದೆ.
4 ಕ್ಷೇತ್ರಗಳಲ್ಲಿ ಮಾಡಿದ ಸಾಧನೆಯನ್ನು ಅಸಾಧಾರಣವೆಂದು ಗುರುತಿಸಲು ಅವರ ಸಾಧನೆಯ ಬಗ್ಗೆ ದಿನಪತ್ರಿಕೆಗಳಲ್ಲಿ ವರದಿಯಾಗಿರಬೇಕು ಅಥವಾ ಸಂಬಂಧಪಟ್ಟ ಕ್ಷೇತ್ರದ ತಜ್ಞರಿಂದ ಪರೀಕ್ಷಿಸಿರಬೇಕು. ಮಕ್ಕಳ ವಯಸ್ಸಿನ ಪ್ರಮಾಣ ಪತ್ರವನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಿಸಿ ಸಲ್ಲಿಸಬೇಕು.
2024-25ನೇ ಸಾಲಿನ ಪ್ರಶಸ್ತಿಗೆ ನಿಗದಿಪಡಿಸಿದ ಅರ್ಜಿ ನಮೂನೆಗಳನ್ನು ಉಪ ನಿರ್ದೇಶಕರ ಕಚೇರಿ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕೊಡಗು ಪಡೆದು ದ್ವಿಪ್ರತಿಯಲ್ಲಿ ಭರ್ತಿ ಮಾಡಿದ ಅರ್ಜಿಗಳೊಂದಿಗೆ ಸಂಬಂಧಪಟ್ಟ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಪ್ರಸ್ತಾವನೆಯನ್ನು ಅಕ್ಟೋಬರ್, 30 ರೊಳಗೆ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚೈನ್ಗೇಟ್, ಮೈಸೂರು ರಸ್ತೆ, ಮಡಿಕೇರಿ ಕಚೇರಿಗೆ ಸಲ್ಲಿಸಬೇಕಿದೆ.
ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ: 9482194105, 08272-224451 ನ್ನು ಸಂಪರ್ಕಿಸಬಹುದು ಎಂದು ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನಟರಾಜು ತಿಳಿಸಿದ್ದಾರೆ.