ಎಚ್.ಡಿ.ಕೋಟೆ: 2024-25ನೇ ಸಾಲಿಗೆ ಹೆಚ್.ಡಿ.ಕೋಟೆ ತಾಲೂಕಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ಪೂರ್ವ ಬಾಲಕರ, ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಪಡೆಯಲು ಪ್ರವರ್ಗ-1, 2ಎ, 3ಎ, ಪ.ಜಾ, ಪವರ್ಗ, ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹೊಸ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ಜು.10 ಆಗಿರುತ್ತದೆ. ಆಲನ್ ಲೈನ್ www.bcwd.karnataka.gov.in ತಾಂತ್ರಿಕ ತೊಂದರೆಗಳಾದಲ್ಲಿ bcwdhelpline@gmail.com ಗೆ ಇ-ಮೇಲ್ ಮುಖಾಂತರ ಅರ್ಜಿ ಅಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಎಚ್.ಡಿ.ಕೋಟೆ ಸಹಾಯವಾಣಿ ಸಂಖ್ಯೆ-8050770004, 8050770005 ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದರೆ.