ರಾಮನಗರ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹಾರೋಹಳ್ಳಿ ತಾಲ್ಲೂಕಿನ ದೊಡ್ಡಬಾದಗೆರೆ ಮುರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಪಿಸಿಎಂಬಿ ಮತ್ತು ಪಿಸಿಎಂಸಿ 2024-25ನೇ ಸಾಲಿಗೆ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವವರು ಅರ್ಜಿ ಸಲ್ಲಿಸಲು ಅರ್ಹರು. ಅರ್ಜಿ ಸಲ್ಲಿಸಲು ಇಚ್ಛಿಸುವ ವಿದ್ಯಾರ್ಥಿಗಳು ಜಿಲ್ಲೆಯ ವಸತಿ ಶಾಲೆಗಳಾದ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಶ್ರೀಮತಿ ಇಂದಿರಾ ಗಾಂಧಿ, ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಗಳಲ್ಲಿ ಅರ್ಜಿ ಪಡೆದು ಮೇ 22 ರೊಳಗೆ ಸಲ್ಲಿಸಬಹುದು.
ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ವಸತಿ ಶಾಲೆಗಳಲ್ಲಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ದಾಖಲಾತಿ ಪಡೆದ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ, ಊಟ ಮತ್ತು ವಸತಿ ಹಾಗೂ ಇತರೆ ಸೌಲಭ್ಯಗಳನ್ನು ನೀಡಲಾಗುವುದು.
ಹೆಚ್ಚಿನ ಮಾಹಿತಿಗೆ ದೂರವಾನಿ ಸಂಖ್ಯೆ: 81058 49315, 96861 14473 ಅಥವಾ 98452 42134 ಅನ್ನು ಸಂಪರ್ಕಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.